nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ
    • ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ
    • ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆಯಲ್ಲಿ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಆಚರಣೆ
    ಕೊರಟಗೆರೆ June 27, 2024

    ಕೊರಟಗೆರೆಯಲ್ಲಿ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಆಚರಣೆ

    By adminJune 27, 2024No Comments2 Mins Read
    korattegere

    ಕೊರಟಗೆರೆ : ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ವಕ್ಕಲಿಗರ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಆಚರಣೆ ಮಾಡಲಾಯಿತು.
    ತಾಲೂಕು ಪಂಚಾಯತಿಯ ಸಮುದಾಯ ಭವನದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಅದ್ದೂರಿಯಾಗಿ ಆಚರಿಸಲಾಯಿತು.

    ತಹಶೀಲ್ದಾರ್ ಮಂಜುನಾಥ್ ಕೆ. ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ವಕ್ಕಲಿಗರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಮತ್ತು ನಿರ್ದೇಶಕರು ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿದರು.


    Provided by
    Provided by

    ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತಹಶೀಲ್ದಾರ್ ಮಂಜುನಾಥ್ ಕೆ., ರಾಜ್ಯ ಸರ್ಕಾರದ ಆದೇಶದಂತೆ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ ಪರಮೇಶ್ವರ್ ಅವರ ಮಾರ್ಗದರ್ಶನದಂತೆ ಈ ಬಾರಿ ವಿಭಿನ್ನವಾಗಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಿದ್ದೇವೆ. ತಾಲೂಕಿನ ಸರ್ಕಾರಿ ಶಾಲೆಗಳ ಮಕ್ಕಳಿಂದ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಸ್ಪರ್ಧೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಿ,ಸನ್ಮಾನಿಸಿ, ಕೆಂಪೇಗೌಡರ ಆಶಯದಂತೆ ಅವರ ಜೀವನದ ಮೌಲ್ಯದಾರಿತ ಗುಣಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ವಿದ್ಯಾಭ್ಯಾಸ ಮಾಡಿ ದೇಶಕ್ಕೆ ಮಾದರಿಯಾಗಬೇಕು ಎಂದು ತಿಳಿಸಿದರು.

    ಕೊರಟಗೆರೆ ಪಟ್ಟಣದ ಸಮೀಪವಿರುವ ಸರ್ಕಾರಿ ಭೂಮಿಗಳನ್ನ ಪರಿಶೀಲನೆ ಮಾಡಿ ಗೃಹ ಸಚಿವರ ಮಾರ್ಗದರ್ಶನದಂತೆ ತಾಲೂಕು ವಕ್ಕಲಿಗರ ಸಂಘಕ್ಕೆ ಎರಡು ಎಕರೆ ಭೂಮಿಯನ್ನು ಶೀಘ್ರವೇ ಮಂಜೂರು ಮಾಡಿ ಕೊಡಲಾಗುವುದು ಎಂದು ಭರವಸೆ ನೀಡಿದರು.

    ನಂತರ ಮಾತನಾಡಿದ ಮಾಜಿ ತಾಲೂಕು ಪಂಚಾಯತ್ ಸದಸ್ಯ ಹಾಗೂ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕ ಎಲ್.ವಿ. ಪ್ರಕಾಶ್, ಕೆಂಪೇಗೌಡರು ಈ ನಾಡಿನ ಆಸ್ತಿ, ಬೆಂಗಳೂರಿಗೆ ಅವರ ಕೊಡುಗೆ ಅಪಾರವಾದುದ್ದು. ಅವರು ಒಂದು ಜಾತಿ ಒಂದು ಧರ್ಮಕ್ಕೆ ಮಾತ್ರ ಸೀಮಿತವಲ್ಲ ಅವರ ಮಾರ್ಗದರ್ಶನದಂತೆ ನಾವೆಲ್ಲರೂ ನಡೆಯಬೇಕು ಎಂದರು.

    ಈಗಾಗಲೇ ರಾಜ್ಯ ಮತ್ತು ಕೇಂದ್ರ ಸರ್ಕಾರವು ನಮ್ಮ ನಾಡಪ್ರಭು ಕೆಂಪೇಗೌಡರ 108 ಅಡಿ ಉದ್ದದ ಪುತ್ಥಳಿಯನ್ನು ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರನ್ನು ನಾಮಕರಣ ಮಾಡಿದೆ ಎಂದರು.

    ನಂತರ ಮಾತನಾಡಿದ ವಕ್ಕಲಿಗರ ಸಂಘದ ನಿರ್ದೇಶಕ ಟಿ.ಸಿ.ಲಕ್ಷ್ಮೀಶ್ ಮಾತನಾಡಿ, ಅತ್ಯಂತ ಅದ್ದೂರಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ತಾಲೂಕು ಆಡಳಿತವು ನಡೆಸಿಕೊಟ್ಟಿದೆ . ಕ್ರಿಯಾಶೀಲ ತಹಶೀಲ್ದಾರ್ ಗೆ ನಮ್ಮ ಸಮುದಾಯದ ಪರವಾಗಿ ವಿಶೇಷವಾದ ಅಭಿನಂದನೆಗಳನ್ನು ತಿಳಿಸುತ್ತೇನೆ ಹಾಗೂ ತಾಲ್ಲೂಕು ವಕ್ಕಲಿಗರ ಸಂಘದ ಸರ್ವತೋಮುಖ ಅಭಿವೃದ್ಧಿಗೆ ಕನಿಷ್ಠ 2 ಎಕರೆ ಭೂಮಿಯನ್ನು ಮಂಜೂರು ಮಾಡಿಕೊಡಬೇಕೆಂದು ತಾಲೂಕು ಆಡಳಿತಕ್ಕೆ ಮನವಿ ಮಾಡಿದರು.

    ನಂತರ ಮಾತನಾಡಿದ ವಕ್ಕಲಿಗರ ಸಂಘದ ನಿರ್ದೇಶಕಿ ಜಯಮ್ಮ ಪ್ರತಿ ವರ್ಷವೂ ಕೂಡ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ವಿಭಿನ್ನವಾಗಿ ಆಚರಿಸಿಕೊಂಡು ಬಂದಿದ್ದೇವೆ. ನಾಡಪ್ರಭು ಕೆಂಪೇಗೌಡರ ಜಯಂತೋತ್ಸವದ ಕಾರ್ಯಕ್ರಮದಲ್ಲಿ ಮತ್ತು ಪೂರ್ವಭಾವಿ ಸಭೆಗಳಲ್ಲಿ ನಿವೇಶನಕ್ಕಾಗಿ ಹತ್ತಾರು ಮನವಿ ಸಲ್ಲಿಸಿದ್ದರು ಕೂಡ ಇಲ್ಲಿಯವರೆಗೂ ನಿವೇಶನ ಮಂಜೂರಾಗಿಲ್ಲ ಈಗಾಗಲೇ ಗೃಹ ಸಚಿವರ ಗಮನಕ್ಕೆ ತಂದಿದ್ದು ನಿವೇಶನ ಕೊಡಿಸಿಕೊಡಲು ಡಾ ಜಿ ಪರಮೇಶ್ವರ್ ಅವರು ಮುಂದಾಗಿದ್ದಾರೆ ಅವರ ಮಾರ್ಗದರ್ಶನದಂತೆ ಮಾನ್ಯ ತಹಶೀಲ್ದಾರ್ ರವರು ಕನಿಷ್ಠ 2 ಎಕರೆ ಭೂಮಿಯನ್ನು ಮಂಜೂರು ಮಾಡಿ ಕೊಡಬೇಕು ಎಂದರು.

    ಈ ಸಂದರ್ಭದಲ್ಲಿ ತಹಶೀಲ್ದಾರ್ ಮಂಜುನಾಥ್ ಕೆ., ಇ ಒ ಅಪೂರ್ವ ಸಿ, ಬಿಇಒ ನಟರಾಜ್, ತಾಲೂಕು ವಕ್ಕಲಿಗರ ಸಂಘದ ಅಧ್ಯಕ್ಷ ರಂಗ ನರಸಪ್ಪ, ಕಾರ್ಯದರ್ಶಿ ನರಸಿಂಹರಾಜು, ವಕ್ಕಲಿಗರ ಸಂಘದ ನಿರ್ದೇಶಕರುಗಳಾದ ಪುಟ್ಟ ನರಸಪ್ಪ, ಜಯಮ್ಮ,ಕೌಶಿಕ್ , ಈಶ್ವರಪ್ಪ, ಕುಮಾರ್ ,ಎಲ್ ವಿ ಪ್ರಕಾಶ್, ರಮೇಶ್, ಟಿ.ಸಿ.ಲಕ್ಷ್ಮೀಶ್, ಕಾಕಿಮಲ್ಲಯ್ಯ, ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ.ವಿ.ಪುರುಷೋತ್ತಮ್ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಮತ್ತು ಕೆಂಪೇಗೌಡರ ಅಭಿಮಾನಿಗಳು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ

     

    admin
    • Website

    Related Posts

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಬೆಂಗಳೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆಗೆ ಆಗ್ರಹಿಸಿ ಕಾಂಗ್ರೆಸ್‌ ನ ಸುಮಾರು 25ಕ್ಕೂ ಹೆಚ್ಚು ಹಿರಿಯ ಶಾಸಕರ ತಂಡ…

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.