ಲೋಕಸಭಾ ಸದಸ್ಯರಾಗಿ ಚುನಾಯಿತರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕನ್ನಡ ಮತ್ತು ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ ಎಂದು ಕರ್ನಾಟಕ ವಿಕಾಸ ರಂಗ ವಿರೋಧ ವ್ಯಕ್ತಪಡಿಸಿದೆ.
ಕರುನಾಡಿನ ಮತದಾರರಿಂದ ಆಯ್ಕೆಯಾದ ರಾಜ್ಯದ ಎಲ್ಲ ಸಂಸದರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರೆಲ್ಲರಿಗೂ ಅಭಿನಂದನೆಗಳು. ಆದರೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕನ್ನಡವನ್ನು ಕಡೆಗಣಿಸಿ, ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದಕ್ಕಾಗಿ ಅವರಿಗೆ ಧಿಕ್ಕಾರ ಹೇಳುತ್ತೇವೆ ಎಂದು ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ.ಚನ್ನೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ಬಿಜೆಪಿ ನಾಯಕಿ ದಿವಂಗತ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್ ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ತಾಯಿಯ ಸಂಪ್ರದಾಯವನ್ನು ಮುಂದುವರಿಸಿದ್ದರು. ಈ ಸಂದರ್ಭದಲ್ಲಿ, ತಾಯಿ ಸುಷ್ಮಾ ಸ್ವರಾಜ್ ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದ ಬಗ್ಗೆ ನೆನಪಿಸಿಕೊಂಡಿದ್ದರು. ಈಗ ವಿಶ್ವೇಶ್ವರ ಹೆಗಡೆ ಕಾಗೇರಿ ಅದೇ ರೀತಿ ಅನುಸರಿಸಲು ಹೋಗಿ ಕನ್ನಡ ಸಂಘಟನೆಗಳು ಮತ್ತು ಕರ್ನಾಟಕ ವಿಕಾಸ ರಂಗ ವಿರೋಧ ವ್ಯಕ್ತಪಡಿಸಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


