ಬೆಂಗಳೂರು : ತಾತನೇ ತನ್ನ 6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈ ವಿಚಾರ ಬಾಲಕಿ ಮನೆಯಲ್ಲಿ ಗೊತ್ತಾಗುತ್ತಿದ್ದಂತೆಯೇ ಯಾರಿಗೂ ಹೇಳದಂತೆ ಬಾಲಕಿ ತಾಯಿಗೆ(ಸೊಸೆ) ಬಂಗಾರ, ಮನೆ ಆಮಿಷವೊಡ್ಡಿದ್ದಾನೆ. ಆದ್ರೆ, ಅತ್ಯಾಚಾರಕ್ಕೆ ಒಳಗಾದ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಹೋದಾಗ ಘಟನೆ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಮನೆಯಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಆರೋಪಿ ಪರಾರಿಯಾಗಲು ಬಾಲಕಿ ತಂದೆಯೇ ಸಹಕರಿಸಿದ್ದಾನೆ ಎನ್ನಲಾಗಿದ್ದು, ಈ ಘಟನೆ ನಂತರ ಮೊಮ್ಮಗಳ ತಾಯಿ ಮತ್ತು ತಂದೆಗೆ ನಿನ್ನ ಮಗಳ ಹೆಸರಿಗೆ ಮನೆ ಬರೆದು ಕೊಡುತ್ತೇನೆ ಪೊಲೀಸರಿಗೆ ದೂರು ಕೊಡಬೇಡಿ ಎಂದು ಆಮಿಷವೊಡಿದ್ದಾನೆ. ಇದಾದ ನಂತರ ಸುಮ್ಮನಿದ್ದ ಬಾಲಕಿಯ ತಾಯಿ ನಾನು ಕೆಲಸಕ್ಕೆ ಹೊರಡುತ್ತೇನೆ ಎಂದು ಸಬೂಬು ಹೇಳಿ ಮನೆಯಿಂದ ಆಚೆಗೆ ಬಂದು ಅಕ್ಕಪಕ್ಕದವರ ಸಹಾಯ ಪಡೆದು ಮಗಳನ್ನು ಆಸ್ಪತ್ರೆಗೆ ಸೇರಿಸಿದ್ದಾಳೆ. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ನಂತರ ಅಲ್ಲಿಗೆ ಬಂದ ಪೊಲೀಸರು ತಾಯಿಗೆ ದೂರು ದಾಖಲಿಸುವಂತೆ ಸೂಚನೆ ನೀಡಿದ್ದಾರೆ. ಬಳಿಕ ಪೊಲೀಸರು ಮತ್ತು ವೈದ್ಯರ ಒತ್ತಾಯಕ್ಕೆ ದೂರು ದಾಖಲಾಗಿದೆ ಎಂದು ವರದಿ ತಿಳಿಸಿದೆ.
ಈ ಬಗ್ಗೆ ಬನ್ನೇರುಘಟ್ಟ ರಸ್ತೆಯ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


