ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಸುಳ್ಳು ದೂರು ಕೊಟ್ಟಿದ್ದ ದೂರುದಾರೆ ಸೇರಿ 13 ಮಂದಿ ಜೈಲು ಪಾಲಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ಬೆಳಗಾವಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಮಹತ್ವದ ಆದೇಶ ಹೊರಡಿಸಿದೆ.
ಸುಳ್ಳು ಅತ್ಯಾಚಾರದ ದೂರು ನೀಡಿದ ಬಿ.ವಿ.ಸಿಂಧೂ ಸೇರಿದಂತೆ 13 ಜನರಿಗೆ 3 ವರ್ಷ 6 ತಿಂಗಳು ಜೈಲು ಶಿಕ್ಷೆ ಹಾಗೂ 13 ಆರೋಪಿಗಳಿಗೂ ತಲಾ 86 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶೆ ಮಹತ್ವದ ತೀರ್ಪು ನೀಡಿದ್ದಾರೆ.
2014ರ ಹೆಸ್ಕಾಂ ಸಹಾಯಕ ಅಧೀಕ್ಷಕ ಅಭಿಯಂತರ ತುಕಾರಾಮ್ ಮಜ್ಜಿಗೆ ಎಂಬವರ ವಿರುದ್ಧ ಬಿ.ವಿ ಸಿಂಧೂ ಅತ್ಯಾಚಾರ ಹಾಗೂ ಜೀವ ಬೆದರಿಕೆ ಕೇಸ್ ದಾಖಲಿಸಿದ್ದಳು. 2014 ನವೆಂಬರ್ 19ರಂದು ಮಾಳಮಾರುತಿ ಠಾಣೆಯಲ್ಲಿ ಅತ್ಯಾಚಾರ, ಜೀವ ಬೆದರಿಕೆ, ಆತ್ಮಹತ್ಯೆ ಪ್ರಚೋದನೆ ಕೇಸ್ ದಾಖಲಾಗಿತ್ತು.
ಈ ಪ್ರಕರಣದಲ್ಲಿ ವಿಚಾರಣೆ ನಡೆಸಿದ ಮಾಳಮಾರುತಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ತನಿಖೆಯಲ್ಲಿ ಅತ್ಯಾಚಾರ, ಜೀವಬೆದರಿಕೆ ಹಾಕಿದ್ದು ಸುಳ್ಳು ಎಂದು ಬಯಲಾಗಿತ್ತು. ಆ ನಂತರ ಇತರೆ ಆರೋಪಗಳಿಂದ ಪ್ರಚೋದನೆಗೆ ಒಳಗಾಗಿ ಸುಳ್ಳು ದೂರು ನೀಡಿದ್ದಾಗಿ ದೂರುದಾರೆ ಸಿಂಧೂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಳು. ಆದರೆ 2017ರಲ್ಲಿ ದೂರುದಾರೆ ಸಿಂಧೂ ಸೇರಿ 13 ಮಂದಿ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 13 ಜನ ಸಾಕ್ಷಿದಾರರಿಂದ 81 ಸಾಕ್ಷಿಗಳ ಸಂಗ್ರಹಿಸಿದ್ದರು. ಅಂದಿನಿಂದ ಸುದೀರ್ಘ ವಿಚಾರಣೆ ನಡೆಸಿ ವಾದ-ವಿವಾದ ಆಲಿಸಿದ ನ್ಯಾಯಾಲಯವು ಗುರುವಾರ ತೀರ್ಪು ಪ್ರಕಟಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


