ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕರ್ನಾಟಕದಲ್ಲಿ ಕಾಟನ್ ಕ್ಯಾಂಡಿ, ಗೋಬಿ ಹಾಗೂ ಕಬಾಬ್ ಗೆ ಕೃತಕ ಬಣ್ಣ ಬಳಕೆ ನಿರ್ಬಂಧಿಸಿರುವ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಪಾನಿಪುರಿ ಕೂಡ ಬ್ಯಾನ್ ಆಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಜನರು ಮುಗಿಬಿದ್ದು ತಿನ್ನುವ ಪಾನಿಪೂರಿಯಲ್ಲೂ ಕೂಡ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ. ಪಾನಿಪೂರಿಗೆ ಬಳಸೋ ಐದು ಮಾದರಿಯ ಸಾಸ್ ಗಳು ಹಾಗೂ ಮೀಟಾ ಖಾರದಲ್ಲಿ ಐದು ಬಗೆಯ ರಾಸಾಯನಿಕ ಅಂಶಗಳು ಪತ್ತೆಯಾಗಿವೆ. ಹೀಗಾಗಿ ಕ್ಯಾನ್ಸರ್ ಕಾರಕ ಇರೋ ಸಾಸ್, ಮೀಟಾ ಖಾರದ ಪುಡಿ ಬ್ಯಾನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಇತ್ತೀಚೆಗೆ ಬೆಂಗಳೂರಿನ 49 ಪ್ರದೇಶಗಳಿಂದ ಈ ಕುರಿತಂತೆ ಮಾಹಿತಿ ಸಂಗ್ರಹಿಸಲಾಗಿದೆ. 49 ಕಡೆ ಪಾನಿಪೂರಿ ತಯಾರಿಕೆ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಇರೋದು ಪತ್ತೆಯಾಗಿದೆ. ಶೀಘ್ರದಲ್ಲೆ ಪಾನಿಪೂರಿಗೆ ಬಳಸೋ ಕ್ಯಾನ್ಸರ್ ಕಾರಕ ಅಂಶಗಳು ಬ್ಯಾನ್ ಮಾಡಲು ನಿರ್ಧಾರ ಮಾಡಲಾಗಿದೆ.
ಅಂದಹಾಗೆ ಕೆಲವು ದಿನಗಳ ಹಿಂದೆ ಕಬಾಬ್ ತಯಾರಿಕೆಯಲ್ಲಿ ಬಳಸುವ ಕಲರ್‌ನಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀಳುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಬಾಬ್‌ಗೆ ಕಲರ್ ಬಳಕೆ ಮಾಡುವಂತಿಲ್ಲ ಎಂದು ಸರ್ಕಾರ ಆದೇಶ ನೀಡಿತ್ತು. ಅಲ್ಲದೆ ಯಾರಾದರು ಕಣ್ಣುತಪ್ಪಿಸಿ ಬಳಕೆ ಮಾಡುವುದು ಕಂಡುಬಂದಲ್ಲಿ 7 ವರ್ಷ ಶಿಕ್ಷೆ ಹಾಗೂ 10 ಲಕ್ಷ ದಂಡದ ಎಚ್ಚರಿಕೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


