ಎಐಎಂಐಎಂ ಅಧ್ಯಕ್ಷ ಓವೈಸಿ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ ಬೆನ್ನಲ್ಲೇ ಐವರು ಪುಂಡರ ಗುಂಪೊಂದು ಅವರ ದೆಹಲಿಯ ನಿವಾಸದ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.
ದಾಳಿ ವೇಳೆ ಓವೈಸಿ ಅವರ ನಾಮಫಲಕಕ್ಕೆ ಕಪ್ಪು ಶಾಯಿ ಹಾಕಲಾಗಿದ್ದು, ಇಸ್ರೇಲ್ ಪರ ಪೋಸ್ಟರ್ ಹಾಕಲಾಗಿದ್ದು, ‘ಐ ಸ್ಟ್ಯಾಂಡ್ ವಿತ್ ಇಸ್ರೇಲ್’ ಎಂಬ ಶೀರ್ಷಿಕೆ ಪೋಸ್ಟ್ ನಲ್ಲಿ ಪತ್ತೆಯಾಗಿದೆ.
ಓವೈಸಿ ಅವರು ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ‘ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್’ ಎಂದು ಹೇಳುವ ಮೂಲಕ ತಮ್ಮ ಪ್ರಮಾಣ ವಚನವನ್ನು ಮುಗಿಸಿದರು. ಈ ಘೋಷಣೆ ವಿರೋಧಿಸಿ ಆಡಳಿತ ಪಕ್ಷದ ಪೀಠದಿಂದ ಭಾರೀ ಪ್ರತಿಭಟನೆ ನಡೆಯಿತು. ಇದೀಗ ಓವೈಸಿ ಮನೆ ಮೇಲೆ ದಾಳಿ ನಡೆಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA