ಗೋಡೆ ಕುಸಿದು ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದ್ದು, ಘಟನೆಯಲ್ಲಿ 5 ಮಂದಿ ಗಾಯಗೊಂಡಿದ್ದಾರೆ.
ಭಾರೀ ಮಳೆ, ಪ್ರವಾಹ ಹಾಗೂ ಗಾಳಿಗೆ ಗೋಡೆ ಕುಸಿದಿದೆ. ನಾಲ್ಕು ವರ್ಷದ ಅಹದ್, ಎಂಟು ವರ್ಷದ ಆದಿಲ್ ಮತ್ತು ಎರಡು ವರ್ಷದ ಅಲ್ಫಿಸಾ ಮೃತಪಟ್ಟವರಾಗಿದ್ದಾರೆ.
ಆಯಿಷಾ, ಹುಸೇನ್, ಸೋಹ್ನಾ, ವಾಸಿಲ್ ಮತ್ತು ಸಮೀರ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರೇಟರ್ ನೋಯ್ಡಾದ ಖೋಡ್ನಾ ಕಲಾನ್ ಗ್ರಾಮದಲ್ಲಿ ಶುಕ್ರವಾರ ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಅಗ್ನಿಶಾಮಕ ದಳದ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇದೇ ವೇಳೆ ಉತ್ತರ ಭಾರತದ ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಅಸ್ಸಾಂನಲ್ಲಿ ಭಾರೀ ಮಳೆ ಮುಂದುವರಿದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA