ನಿರ್ಮಾಣ ಹಂತದ ಸೇತುವೆಗಳು ಕುಸಿದು ಬೀಳುವ ವಿಚಾರದಲ್ಲಿ ಬಿಹಾರ ರಾಜ್ಯ ಕುಖ್ಯಾತವಾಗಿದೆ. ಕಳೆದ 9 ದಿನಗಳ ಅವಧಿಯಲ್ಲಿ ಬಿಹಾರ ರಾಜ್ಯಾದ್ಯಂತ ಐದು ಸೇತುವೆ ಕುಸಿತ ಕಂಡಿದೆ.
ಶುಕ್ರವಾರ ಬಿಹಾರದ ಮಧುಬನಿ ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದಿದೆ. ಮಧುಬನಿ ಜಿಲ್ಲೆಯ ಭೇಜಾ ಪೊಲೀಸ್ ಠಾಣೆಯ ಮಾದೇಪುರ್ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ.
ಬಿಹಾರ ಸರ್ಕಾರದ ಗ್ರಾಮೀಣ ಕಾಮಗಾರಿ ಇಲಾಖೆಯು 2021 ರಿಂದ 3 ಕೋಟಿ ವೆಚ್ಚದಲ್ಲಿ ಈ ಸೇತುವೆ ನಿರ್ಮಿಸುತ್ತಿತ್ತು.
ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ತೇಜಸ್ವಿ ಯಾದವ್ ಇತ್ತೀಚಿನ ಪತನವನ್ನು ಗುರುತಿಸಿ ಬೇಸರ ವ್ಯಕ್ತಪಡಿಸಿದ್ದಾರೆ.
ಜೂನ್ 19 ರಂದು, ಅರಾರಿಯಾದಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ಒಂದು ಭಾಗವು ಕುಸಿದಿತ್ತು. ಕೋಟಿಗಟ್ಟಲೆ ಖರ್ಚು ಮಾಡಿ ಬಕ್ರಾ ನದಿಗೆ ನಿರ್ಮಿಸಿದ ಕಾಂಕ್ರೀಟ್ ಸೇತುವೆ ಸೆಕೆಂಡ್ ಗಳಲ್ಲಿ ಬೇರ್ಪಟ್ಟಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA