ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿ. ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಒಪ್ಪಿಗೆ ನೀಡಲಾಗಿದೆ. ಈ ಕುರಿತು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಾಹಿತಿ ನೀಡಿದೆ.
ಗ್ರಾಮ ಪಂಚಾಯತಿಗಳಲ್ಲಿ ಖಾಲಿಯಾಗಿರುವ ಕರವಸೂಲಿಗಾರರರು, ಕ್ಲರ್ಕ ಕಂ ಡಾಟಾ ಎಂಟ್ರಿ ಆಪರೇಟರ್, ವಾಟರ್ ಆಪರೇಟರ್ ಹಾಗೂ ಸ್ವಚ್ಛತಾಗಾರರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗೆ ಒಂದು ಸಿಬ್ಬಂದಿಯನ್ನು ಸರ್ಕಾರದ ಅಧಿಸೂಚನೆ ಸಂ:ಗ್ರಾಅಪ 886 ಗ್ರಾಪಂಕಾ 2016 ದಿನಾಂಕ 29-06-2020 ರಲ್ಲಿ ಸೂಚಿಸಿರುವಂತೆ ನಿಯಮಾನುಸಾರ ನೇಮಕಾತಿ ಮಾಡಿಕೊಳ್ಳಲು ಎಲ್ಲಾ ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಲಾಗಿದೆ.
ಈ ಕುರಿತು ಆಯಾ ಜಿಲ್ಲೆಯ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಆಯಾ ಜಿಲ್ಲಾಡಳಿತದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಹುದ್ದೆಯ ಹೆಸರು:
ಕರವಸೂಲಿಗಾರರು / ಬಿಲ್ ಕಲೆಕ್ಟರ್
ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್‌ಗಳು
ವಾಟರ್ ಆಪರೇಟರ್
ಸ್ವಚ್ಛತಾಗಾರರು
ಶೈಕ್ಷಣಿಕ ವಿದ್ಯಾರ್ಹತೆ :
ದ್ವಿತೀಯ ಪಿಯುಸಿ ಪಾಸ್ ಜತೆಗೆ ಕಂಪ್ಯೂಟರ್ ಜ್ಞಾನ ಹೊಂದಿರುವುದು, ಪ್ರಮಾಣ ಪತ್ರ ಹೊಂದಿರುವುದು
ಕನಿಷ್ಠ 7ನೇ ತರಗತಿ.
ಯಾವುದೇ ವಿದ್ಯಾರ್ಹತೆ ಕಡ್ಡಾಯವಲ್ಲ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


