ಕೊಡಗಿನಲ್ಲಿ ಹೊಸ ಟ್ರೆಂಡ್ ಆಗಿ ಪ್ರವಾಸಿಗರನ್ನು ಸೆಳೆಯಲು ಹಲವು ಪ್ರದೇಶಗಳಲ್ಲಿ ಗಾಜಿನ ಸೇತುವೆಗಳನ್ನೂ ನಿರ್ಮಿಸಲಾಗುತ್ತಿದೆ. ಕೆ ನಿಡುಗಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸುಮಾರು 200 ಮೀಟರ್ ಉದ್ದದ ಗಾಜಿನ ಸೇತುವೆಯು ವಿಶಾಲವಾದ ಹಸಿರು ಮತ್ತು ಪರ್ವತಗಳ ಮಧ್ಯ ನಿರ್ಮಿಸಲಾಗಿದೆ. ಈ ಗಾಜಿನ ಸೇತುವೆಯು ಪ್ರಧಾನ ಪ್ರವಾಸಿ ತಾಣವಾದ ಅಬ್ಬೆ ಜಲಪಾತದ ದಾರಿಯಲ್ಲಿದೆ.
ಈ ಸೇತುವೆಯನ್ನು ನಿರ್ಮಿಸಲು ಖಾಸಗಿಯವರು ಕೋಟಿಗಟ್ಟಲೆ ಹಣವನ್ನು ಖರ್ಚು ಮಾಡಿದರೂ, ಸೇತುವೆಯ ಸುರಕ್ಷತೆಗೆ ಸಂಬಂಧಿಸಿದಂತೆ ಯಾವುದೇ ವೈಜ್ಞಾನಿಕ ಕ್ರಮಗಳನ್ನು ತೆಗೆದುಕೊಳ್ಳಲಾಗಿಲ್ಲ. ಹೀಗಾಗಿ ಅದು ಈಗ ದುರ್ಬಲ ಸ್ಥಿತಿಯಲ್ಲಿದೆ. ಜೌಗು ಪ್ರದೇಶದಲ್ಲಿರುವ ಈ ಗಾಜಿನ ಸೇತುವೆಯ ಕೆಳಗಿನ ಸಡಿಲವಾದ ಮಣ್ಣು ಕ್ರಮೇಣ ಕೆಳಕ್ಕೆ ಜಾರುತ್ತಿರುವುದರಿಂದ ಅಪಾಯದ ಸ್ಥಿತಿ ಎದುರಾಗಿದೆ.
ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಗ್ಲಾಸ್ ಬ್ರಿಡ್ಜ್ ಅನ್ನು ಸೂಕ್ತ ಅನುಮತಿ ಇಲ್ಲದ ಕಾರಣ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಬಂದ್ ಮಾಡಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಕೆ. ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಅತೀ ಉದ್ದ ಮತ್ತು ಎತ್ತರದ ಗಾಜಿನ ಸೇತುವೆ ಪಿಲ್ಲರ್ ಬಳಿಗಳಲ್ಲಿ ಸಣ್ಣ ಪ್ರಮಾಣದಲ್ಲಿ ಭೂಕುಸಿತವಾಗಿದೆ. ತುಂಬಾ ಕಡಿದಾದ ಇಳಿಜಾರು ಪ್ರದೇಶದಲ್ಲಿ ಗಾಜಿನ ಸೇತುವೆ ಮಾಡಿರುವುದರಿಂದ ಭೂಕುಸಿತವಾಗುವುದಕ್ಕೆ ಕಾರಣವಾಗಿರಬಹುದು. ಗಾಜಿನ ಸೇತುವೆ ಕುಸಿಯುವ ಆತಂಕ ಎದುರಾಗಿರುವುದಿರಂದ ಸದ್ಯ ಪ್ರವಾಸಿಗರ ವೀಕ್ಷಷಣೆಗೆ ಅವಕಾಶ ಇಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಮಡಿಕೇರಿ ತಹಶೀಲ್ದಾರ್ ಮೂಲಕ ಗಾಜಿನ ಸೇತುವೆಗೆ ಬೀಗ ಹಾಕಿಸಿ ಬಂದ್ ಮಾಡಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


