ಮಂಡ್ಯ: ಕೆಎಸ್ ಆರ್ ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗೇಟ್ ಬಳಿ ಶನಿವಾರ ನಡೆದಿದೆ.
ಬೆಂಗಳೂರು–ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಸರ್ವಿಸ್ ರಸ್ತೆಯಲ್ಲಿದ್ದ ಕಾರು, ಬೈಕ್ ಗಳಿಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ನುಗ್ಗಿದೆ.
ಘಟನೆಯಲ್ಲಿ ಬಸ್ ನಲ್ಲಿದ್ದ 8 ಪ್ರಯಾಣಿಕರಿಗೆ ಗಾಯವಾಗಿದ್ದು, ಚಾಲಕನ ಕಾಲು ಮುರಿದಿದೆ. ಗಾಯಾಳುಗಳನ್ನು ಮಂಡ್ಯ, ಮೈಸೂರು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಸ್ ನಲ್ಲಿ 30 ಜನ ಪ್ರಯಾಣಿಕರಿದ್ದರು ಎನ್ನಲಾಗಿದೆ. ಇನ್ನೂ ಅಪಘಾತದಲ್ಲಿ 1 ಕಾರು ಹಾಗೂ 4ಕ್ಕೂ ಹೆಚ್ಚು ಬೈಕ್ ಗಳು ಜಖಂಗೊಂಡಿದೆ. ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


