ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದು, “ಚಾಂಪಿಯನ್! ನಮ್ಮ ತಂಡವು ಟಿ20 ವಿಶ್ವಕಪ್ ಅನ್ನು ಮನೆಗೆ ತರುತ್ತಿದೆ! ನಾವು ಭಾರತೀಯ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆಪಡುತ್ತೇವೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ, ಪೋಸ್ಟ್ ಮಾಡಿದ್ದಾರೆ.
ಜೊತೆಗೆ ಭಾರತ ಕ್ರಿಕೆಟ್ ತಂಡವನ್ನು ಅಭಿನಂದಿಸುವ ವೀಡಿಯೊ ಸಂದೇಶದಲ್ಲಿ ಪ್ರಧಾನಿ ಮೋದಿ, ಭಾರತ ತಂಡವು ವಿಶ್ವಕಪ್ ಗೆದ್ದಿದೆ. ಜೊತೆಗೆ ಕೋಟ್ಯಂತರ ಭಾರತೀಯರ ಹೃದಯವನ್ನು ಗೆದ್ದಿದೆ. ಇಡೀ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೇ ಅಜೇಯ ಸಾಧನೆ ಮಾಡಿರುವುದು ಸಣ್ಣ ಸಾಧನೆಯಲ್ಲ ಎಂದು ಹೇಳಿದ್ದಾರೆ.
ಐಸಿಸಿ ಟಿ20 ವಿಶ್ವಕಪ್‌ನ ಫೈನಲ್ ನಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು 7 ರನ್ ಗಳಿಂದ ಸೋಲಿಸಿತು. ರೋಹಿತ್ ಶರ್ಮಾ ನೇತೃತ್ವದ ತಂಡವು 11 ವರ್ಷಗಳ ನಂತರ ಐಸಿಸಿ ಟ್ರೋಫಿ ಗೆದ್ದಿತು. 2011 ರ ವಿಶ್ವಕಪ್ ಬಳಿಕ ಇದು ಭಾರತದ ಮೊದಲ ವಿಶ್ವಕಪ್ ಗೆಲುವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA