ಚಿಕ್ಕಮಗಳೂರು: 6 ವರ್ಷದ ಬಾಲಕಿ ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಸಾನಿಯಾ ಎಂದು ಗುರುತಿಸಲಾಗಿದೆ. ಕಳೆದ 4 ದಿನಗಳ ಹಿಂದೆ ಸೋಂಕಿಗೆ ತುತ್ತಾಗಿದ್ದ ಬಾಲಕಿಯನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿ ಚೇತರಿಸಿಕೊಳ್ಳದ ಕಾರಣ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ಬಾಲಕಿಯನ್ನ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಜೂ.29 ರಾತ್ರಿ ಮೃತಪಟ್ಟಿದ್ದಾಳೆ.
ಡೆಂಗ್ಯೂ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ಸಿಗದ ಕಾರಣದಿಂದ ತನ್ನ ಮಗಳು ಸಾವಿಗೀಡಾಗಿದ್ದಾಳೆಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ. ಮಗಳ ಚಿಕಿತ್ಸೆಗಾಗಿ ಬಾಲಕಿ ಪೋಷಕರು 4 ಲಕ್ಷ ರೂ. ಖರ್ಚು ಮಾಡಿದ್ದರು. ಆದರೂ ಬಾಲಕಿಯನ್ನು ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ತಂದೆ ಕಣ್ಣೀರಿಟ್ಟಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಸೋಂಕಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಇದರಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದೆ. ಸಕಾಲದಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಕ್ಕಿದ್ದರೆ ಮಗಳು ಬದುಕುತ್ತಿದ್ದಳು ಎಂದು ಬಾಲಕಿ ತಂದೆ ಅಳಲು ತೋಡಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


