ಉತ್ತರ ಪ್ರದೇಶದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಏನು ಎನ್ನುವುದಕ್ಕೆ ಬಿಜೆಪಿಯ ಮಾತೃ ಸಂಸ್ಥೆ ಆರ್ ಎಸ್ ಎಸ್ ಉತ್ತರ ನೀಡಿದೆ.
ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆಯಾಗಲು ದಲಿತ ಮತ್ತು ಹಿಂದುಳಿದ ವರ್ಗಗಳ ಮತಬ್ಯಾಂಕ್ ವಿಭಜನೆಯಾಗಿದ್ದೇ ಪ್ರಮುಖ ಕಾರಣವಂತೆ ಅಲ್ಲದೇ ಹಲವು ಕಾರಣಗಳನ್ನು ಆರ್ ಎಸ್ ಎಸ್ ನೀಡಿದೆ.
* ದಲಿತ ಮತ್ತು ಹಿಂದುಳಿದ ವರ್ಗದ ಮತಗಳನ್ನು ಸೆಳೆಯುವಲ್ಲಿ ಕಾಂಗ್ರೆಸ್–ಸಮಾಜವಾದಿ ಮೈತ್ರಿಕೂಟ ಯಶಸ್ವಿಯಾಗಿದ್ದು ಬಿಜೆಪಿ ಹಿನ್ನಡೆಗೆ ಕಾರಣವಾಯ್ತು.
* ನಿರುದ್ಯೋಗ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಯುವಕರಲ್ಲಿ ಹೆಚ್ಚುತ್ತಿರುವ ಕೋಪವೇ ಬಿಜೆಪಿಯ ಹಿನ್ನಡೆಗೆ ಮತ್ತೊಂದು ಕಾರಣ ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಬಿಜೆಪಿಯ ಚುನಾವಣಾ ಕಾರ್ಯಕ್ಷಮತೆಯನ್ನು ಪರಿಶೀಲಿಸಲು ಮೂರು ದಿನಗಳ ಕಾಲ ನಡೆಸಿದ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಹೀನಾಯ ಸೋಲಿನಿಂದ ಪಾಠ ಕಲಿತ ಬಿಜೆಪಿ ಮಾತೃ ಸಂಸ್ಥೆಯಾದ ಸಂಘವು ಈಗ ಉದ್ಯೋಗ ಹೆಚ್ಚಿಸುವಂತಹ ವಿಷಯಗಳಲ್ಲಿ ಕೆಲಸ ಮಾಡಲು ನಿರ್ಧರಿಸಿದೆ. ಇದು ದಲಿತರು ಮತ್ತು ಹಿಂದುಳಿದ ವರ್ಗಗಳಿಗೆ ತಲುಪುವಂತೆ ಕಾರ್ಯ ನಿರ್ವಹಿಸಲಿದೆ ಎಂದು ಮೂಲಗಳು ತಿಳಿಸಿವೆ. ಈ ನಿಟ್ಟಿನಲ್ಲೇ ಉತ್ತರಪ್ರದೇಶದ ಪ್ರಮುಖ ಪ್ರದೇಶಗಳಲ್ಲಿನ ತನ್ನ ಪ್ರಚಾರಕರನ್ನು ಸ್ಥಳಾಂತರ ಮಾಡಿ ಮರು ಸಂಘಟನೆಗೆ ಕಾರ್ಯತಂತ್ರ ರೂಪಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


