ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಡೆಂಘಿ ಹಾವಳಿ ಹೆಚ್ಚಾಗಿದ್ದು, ರಾಜ್ಯದಲ್ಲಿ ಕಳೆದ ಆರು ತಿಂಗಳಲ್ಲಿ ಸುಮಾರು 2,457 ಮಂದಿಗೆ ಡೆಂಘೀ ಕಾಣಿಸಿಕೊಂಡಿದೆ. ಕೆಲ ದಿನಗಳಿಂದ ಡೆಂಘಿ ಹರಡುವಿಕೆ ಹೆಚ್ಚಾಗಿದ್ದು, ಅನಾರೋಗ್ಯದಿಂದ ನೂರಾರು ಜನ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.
ಮಾಹಿತಿ ಪ್ರಕಾರ ಬೆಂಗಳೂರು ನಗರವೊಂದರಲ್ಲೇ ಪ್ರತಿ ಎರಡು ಗಂಟೆಗೆ ಇಬ್ಬರಲ್ಲಿ ಡೆಂಘಿ ಲಕ್ಷಣಗಳು ಕಂಡುಬರುತ್ತಿವೆ. ಗ್ರಾಮೀಣ ಪ್ರದೇಶಗಳಲ್ಲೂ ಇದರ ಹಾವಳಿ ಹೆಚ್ಚಾಗುತ್ತಿದೆ. ಆದ್ರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಟೆಸ್ಟಿಂಗ್ ಕಿಟ್ ಗಳ ಕೊರತೆ ಇರುವುದರಿಂದ ಪರದಾಟ ಹೆಚ್ಚಾಗುತ್ತಿದೆ. ಬಡವರು ಖಾಸಗಿ ಆಸ್ಪತ್ರೆಗಳಿಗೆ ಹೋಗಲಾಗದೇ ಒದ್ದಾಡುತ್ತಿದ್ದಾರೆ.
ಬೆಂಗಳೂರಿನ ಆರೋಗ್ಯ ಕೇಂದ್ರಗಳಲ್ಲಿ ಟೆಸ್ಟಿಂಗ್ ಕಿಟ್ ಗಳ ದಾಸ್ತಾನಿಲ್ಲ. ನಗರದ ಆಸ್ಪತ್ರೆಗಳಲ್ಲಿ ದಿನಕ್ಕೆ ಈಗ ಕೇವಲ 200 ರಿಂದ 250 ಟೆಸ್ಟ್ ಗಳನ್ನಷ್ಟೇ ಮಾಡಲಾಗುತ್ತಿದೆ. ಇದೀಗ 30 ಸಾವಿರ ಟೆಸ್ಟಿಂಗ್ ಕಿಟ್ ಪೂರೈಸುವಂತೆ ಕೆಎಸ್ ಎಂಸಿಗೆ ಪಾಲಿಕೆ ಬೇಡಿಕೆ ಇಟ್ಟಿದೆ. ಇನ್ನು ಮೈಸೂರು, ಹಾಸನ, ಗದಗ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೂಡಾ ಡೆಂಘೀ ಹಾವಳಿ ಜಾಸ್ತಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


