ಕಲಬುರಗಿ: ತಾಲ್ಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿ ಸಿಡಿಲಿನಿಂದಾಗಿ ಮನೆಯೊಂದಕ್ಕೆ ಬೆಂಕಿ ಹತ್ತಿಕೊಂಡ ಘಟನೆ ನಡೆದಿದ್ದು, ಘಟನೆಯಿಂದ ಮನೆಯಿಡೀ ಹೊತ್ತಿ ಉರಿದಿದೆ.
ಹೊನ್ನಕಿರಣಗಿ ಗ್ರಾಮದ ರಾಜ್‌ಕುಮಾರ್ ನಿಂಗಯ್ಯ ಕೋಣಿನ್ ಎಂಬುವವರ ಮನೆಗೆ ಸಿಡಿಲಿನಿಂದಾಗಿ ಬೆಂಕಿ ಬಿದ್ದಿದೆ. ಪರಿಣಾಮವಾಗಿ ಇಡೀ ಮನೆ ಸುಟ್ಟುಹೋಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಇತರ ಮನೆಗಳಿಗೂ ಬೆಂಕಿ ಹರಡುವ ಅಪಾಯವಿತ್ತು. ಆದ್ರೆ ಅದನ್ನು ತಡೆಯಲಾಗಿದೆ.
ಮನೆಯಲ್ಲಿದ್ದವರನ್ನು ರಕ್ಷಣೆ ಮಾಡಲಾಗಿದ್ದು, ಅವರು ಸೇಫಾಗಿದ್ದಾರೆ.. ಆದ್ರೆ ಮನೆಯಲ್ಲಿ ಎಲ್ಲಾ ವಸ್ತುಗಳೂ ಬೆಂಕಿಗೆ ಆಹುತಿಯಾಗಿವೆ. ಫರಹತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿ ಈ ಘಟನೆ ನಡೆದಿದ್ದು, ಸಮಯಕ್ಕೆ ಸರಿಯಾಗಿ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


