ಕೇರಳ : ನೆರೆಯ ರಾಜ್ಯ ಕೇರಳದಲ್ಲಿ ಕಳೆದ ಆರು ತಿಂಗಳಲ್ಲಿ 27 ಮಂದಿ ಕಾಮಾಲೆಗೆ ಬಲಿಯಾಗಿದ್ದಾರೆ. ಜೂನ್ ತಿಂಗಳೊಂದರಲ್ಲೇ ಐದು ಸಾವು ಸಂಭವಿಸಿದೆ. ಬಾಧಿತರಾದವರಲ್ಲಿ ಹೆಚ್ಚಿನವರು ಯುವಕರಾಗಿದ್ದಾರೆ.
ಪ್ರತಿನಿತ್ಯ ಜ್ವರ ಪೀಡಿತರ ಸಂಖ್ಯೆ ಹತ್ತು ಸಾವಿರ ದಾಟಿದೆ. ಈ ತಿಂಗಳೊಂದರಲ್ಲೇ 690 ಮಂದಿಗೆ ಜಾಂಡೀಸ್ ಇರುವುದು ಪತ್ತೆಯಾಗಿದೆ.
ಸೋಂಕಿತರಲ್ಲಿ ಹೆಚ್ಚಿನವರು ಉತ್ತರದ ಜಿಲ್ಲೆಗಳಿಂದ ಬಂದವರಾಗಿದ್ದಾರೆ. ಜ್ವರ ಪೀಡಿತರ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, ಪ್ರತಿನಿತ್ಯ ಜ್ವರ ಪೀಡಿತರ ಸಂಖ್ಯೆ ಹತ್ತು ಸಾವಿರ ದಾಟಿದೆ. ಇದರ ಜೊತೆಗೆ ಡೆಂಗ್ಯೂ ಮತ್ತು ರೇಬಿಸ್ ಪ್ರಕರಣಗಳೂ ಹೆಚ್ಚುತ್ತಿರುವುದರಿಂದ ಕೇರಳ ಆರೋಗ್ಯ ಇಲಾಖೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ. ಮಲಪ್ಪುರಂ ವಲ್ಲಿಕುಂ ಪ್ರದೇಶದಲ್ಲಿ ಹಳದಿ ಜ್ವರ ಹರಡುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA