ಕನ್ನಡ ನಟ ಗೊಲ್ಡನ್ ಸ್ಟಾರ್ ಗಣೇಶ್ ಈ ವರ್ಷವೂ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಈ ವರ್ಷ ಹುಟ್ಟುಹಬ್ಬ ಆಚರಿಸದೆ ಇರಲು ಕಾರಣವನ್ನೂ ಗಣೇಶ್ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ. ” ನನ್ನ ಆತ್ಮೀಯ ಅಭಿಮಾನಿಗಳೇ, ಜುಲೈ 2ರಂದು ನಾನು ನನ್ನ ಬೆಂಗಳೂರು ನಿವಾಸದಲ್ಲಿ ಲಭ್ಯನಿಲ್ಲ.ಆದೇಕೋ ತಮ್ಮೊಂದಿಗೆ ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕೆಂಬ ನನ್ನ ಹಂಬಲ ಈ ಬಾರಿಯೂ ಕೈಗೂಡುತ್ತಿಲ್ಲ” ಎಂದು ಗೋಲ್ಡನ್ ಸ್ಟಾರ್ ಗಣೇಶ್ ಟ್ವೀಟ್ ಮಾಡಿದ್ದಾರೆ.
“ಹೀಗಾಗಿ ನನ್ನ ಪ್ರೀತಿಯ ಅಭಿಮಾನಿಗಳು ಮನೆಯ ಬಳಿ ಬಾರದೇ ತಾವು ಇದ್ದಲ್ಲಿಂದಲೇ ನನ್ನನ್ನು ಹರಸಿ, ಆಶೀರ್ವದಿಸಿ. ಮುಂದಿನ ವರ್ಷ ಖಂಡಿತ ಒಟ್ಟಿಗೇ ಹುಟ್ಟುಹಬ್ಬ ಆಚರಿಸೋಣ. ಅನಾನುಕೂಲಕ್ಕೆ ಕ್ಷಮೆಯಿರಲಿ. ಎಂದಿನ ತಮ್ಮ ಅಭಿಮಾನದ ನಿರೀಕ್ಷೆಯೊಂದಿಗೆ, ನಿಮ್ಮವ ಗಣೇಶ್” ಎಂದು ಟ್ವೀಟ್ ಮಾಡಿದ್ದಾರೆ.
2019ರಲ್ಲಿ ನಟ ಗಣೇಶ್ ಅವರು ತನ್ನ 41ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರಲಿಲ್ಲ. ಕೆಲವು ವಾರಗಳ ಹಿಂದೆ ತಂದೆ ಅಗಲಿದ ಕಾರಣ ಹುಟ್ಟುಹಬ್ಬ ಕ್ಯಾನ್ಸಲ್ ಮಾಡಿಕೊಂಡಿದ್ದರು. 2021ರಲ್ಲೂ ಕೊರೊನಾದಿಂದ ಜಗತ್ತು ನೋವಿನಲ್ಲಿರುವ ಕಾರಣದಿಂದ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ.
ನನ್ನ ಆತ್ಮೀಯ ಅಭಿಮಾನಿಗಳೇ,
ಜುಲೈ 2ರಂದು ನಾನು ನನ್ನ ಬೆಂಗಳೂರು ನಿವಾಸದಲ್ಲಿ ಲಭ್ಯನಿಲ್ಲ.
ಆದೇಕೋ ತಮ್ಮೊಂದಿಗೆ ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕೆಂಬ ನನ್ನ ಹಂಬಲ ಈ ಬಾರಿಯೂ ಕೈಗೂಡುತ್ತಿಲ್ಲ .
ಹೀಗಾಗಿ ನನ್ನ ಪ್ರೀತಿಯ ಅಭಿಮಾನಿಗಳು ಮನೆಯ ಬಳಿ ಬಾರದೇ ತಾವು ಇದ್ದಲ್ಲಿಂದಲೇ ನನ್ನನ್ನು ಹರಸಿ,ಆಶೀರ್ವದಿಸಿ.
ಮುಂದಿನ ವರ್ಷ ಖಂಡಿತ ಒಟ್ಟಿಗೇ…— Ganesh (@Official_Ganesh) June 30, 2024
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


