ಬೆಂಗಳೂರು: ಅಪ್ರಾಪ್ತ ವಯಸ್ಸಿನ ಹುಡುಗಿಯನ್ನು ಯುವಕನೊಬ್ಬ ಅಪಹರಿಸಿರುವ ಬಗ್ಗೆ ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ಪೊಲೀಸರು ದೂರು ನೀಡಿರುವ ಘಟನೆ ವರದಿಯಾಗಿದೆ.
ಶಂಕರ್ ಎಂಬ ಯುವಕ 16 ರ ಹರೆಯದ ಬಾಲಕಿಯನ್ನು ಕಿಡ್ನಾಪ್ ಮಾಡಿರುವುದಾಗಿ ದೂರಲ್ಲಿ ತಿಳಿಸಲಾಗಿದೆ. ಬಾಲಕಿ ಕಿಡ್ನಾಪ್ ಆಗಿ 14 ದಿನಗಳಾಗಿದ್ದು, ಪೋಷಕರು ಚಿಂತಾಕ್ರಾಂತರಾಗಿದ್ದಾರೆ.
ಕಾಲೇಜಿಗೆಂದು ಹೋದ ಮಗಳು ನಂತರ ಕಾಲೇಜಿನಿಂದ ವಾಪಸ್ ಬಾರದ ಕಾರಣ ಕುಟುಂಬಸ್ಥರಿಂದ ಹುಡುಕಾಟ ನಡೆದಿದೆ. ಮೊಬೈಲ್ ಫೋನ್ ಗೆ ಕರೆ ಮಾಡಿದರೆ ಸ್ವಿಚ್ ಆಫ್ ಆಗಿದೆ ಎಂದು ಪೋಷಕರು ದೂರಿನಲ್ಲಿ ಪೊಲೀಸರಿಗೆ ತಿಳಿಸಿದ್ದಾರೆ.
ಶಂಕರ್ ಮೊಬೈಲ್ ಟ್ರೇಸ್ ಮಾಡಿದಾಗ ಚಿಕ್ಕಬಳ್ಳಾಪುರದಲ್ಲಿ ಶಂಕರ್ ಬೈಕ್ ಪತ್ತೆಯಾಗಿದೆ. ಸಿಸಿಟಿವಿ ಪರಿಶೀಲನೆಯಲ್ಲಿ ಆಂಧ್ರದ ಕರ್ನೂಲ್ ಬಸ್ಸು ಹತ್ತಿ ತೆರಳಿರುವುದು ಕಂಡು ಬಂದಿದೆ. ಹೀಗಾಗಿ ಆಂಧ್ರಪ್ರದೇಶಕ್ಕೆ ತೆರಳಿ ತಲೆ ಮರೆಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


