ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋವಕಾಶ ನೀಡಲಾಗುತ್ತಿದ್ದು, ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಅದಕ್ಕಾಗಿ ಕನ್ನಡಿಗರಿಗೆ ಎಲ್ಲ ವಲಯದಲ್ಲಿ ಉದ್ಯೋಗ ಮೀಸಲಾತಿ ಕಲ್ಪಿಸುವ ಕಾಯ್ದೆ ಹಾಗೂ ಡಾ.ಸರೋಜಿ ಮಹಿಷಿ ವರದಿಯನ್ನು ಅನುಷ್ಟಾನಕ್ಕೆ ಕ್ರಮ ವಹಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ.
ಸೋಮವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಕರವೇ ವತಿಯಿಂದ ನಡೆದ ಬೃಹತ್ ಧರಣಿಯಲ್ಲಿ ಮಾತನಾಡಿದ ಅವರು, ‘ಬೇರೆ ರಾಜ್ಯಗಳಿಂದ ಉದ್ಯೋಗಕ್ಕಾಗಿ ಬೆಂಗಳೂರಿಗೆ ವಲಸೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಅದಕ್ಕಾಗಿ ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಲ್ಲಿ ಶೇ.100ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಮೇಲ್ದರ್ಜೆ ಹುದ್ದೆಗಳಲ್ಲಿ ಶೇ.80ರಷ್ಟು ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.
ಎಲ್ಲ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು ಎನ್ನುವ ಸರೊಜಿನಿ ಮಹಿಷಿ ವರದಿ 40 ವರ್ಷಗಳ ಹಿಂದೆ ಜಾರಿಯಾಗಬೇಕಿತ್ತು. ಆದರೆ ಅದು ಜಾರಿಯಾಗಿಲ್ಲ. ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರು ಯಾವುದಕ್ಕೆ ಮಣಿದರೋ ಗೊತ್ತಿಲ್ಲ. ಅದಕ್ಕಾಗಿ ನಿರಂತರ ಹೋರಾಟ ಮಾಡುತ್ತಿದ್ದೇವೆ. ಎಲ್ಲ ಸರಕಾರದ ಮುಂದೆ ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವ ಬೇಡಿಕೆ ಇಟ್ಟಿದ್ದೆವು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿಗೊಳಿಸುತ್ತಾರೆ ಎನ್ನುವ ನಂಬಿಕ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಇದೇ ವೇಳೆ ಕಲಾವಿದರಾದ ಉಮಾ ವೈ.ಜಿ, ಮೋಹನ್ ಕುಮಾರ್, ಗುರುರಾಜ್ ಹೊಸಕೋಟೆ ಅವರು ಹೋರಾಟ ಹಾಡು ಹಾಡಿದರು. ಧರಣಿಯಲ್ಲಿ ವಿವಿಧ ಕನ್ನಡಪರ ಸಂಘಟನೆ ಮುಖಂಡರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


