ಹಾವೇರಿ : ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದ ಬಳಿ ನಡೆದಿದೆ.
ಹರಳಯ್ಯ ನಗರದ ನಿವಾಸಿಗಳಾದ ನಂದನ್ ಶಿವಪ್ಪನವರ(22) ಹಾಗೂ ವೈಭವ ಪಟ್ಟಣ್ಣಶೆಟ್ಟಿ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಸುಳ್ಳು ನೆಪ ಹೇಳಿ ಮನೆಯಿಂದ ಹೋಗಿದ್ದ ಇಬ್ಬರು ಸ್ನೇಹಿತರು ರಾತ್ರಿ ಪೂರ್ತಿ ಕುಡಿದು, ಮನೆಗೆ ತೆರಳಿದ್ದಾರೆ. ಈ ವೇಳೆ ರಾಣೇಬೆನ್ನೂರು ನಗರದ ನೇಕಾರ ಕಾಲೋನಿ ಬಳಿ ಬರುವಾಗ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಇಬ್ಬರು ಗಂಭೀರ ಗಾಯಗೊಂಡಿದ್ದು, ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಸದ್ಯ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


