ಕೋಲಾರ: SSLC ಮುಗಿಸಿ ಪ್ರಥಮ ಪಿಯುಸಿ(1st PUC) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿ ಕಾಲೇಜಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಕೋಲಾರದಲ್ಲಿ ನಡೆದಿದೆ.
ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನಲ್ಲಿ ಶೌಚಾಲಯಕ್ಕೆಂದು ಹೋಗಿದ್ದಾಳೆ. ಈ ವೇಳೆ ಆಕೆ ಶೌಚಾಲಯದಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇದರಿಂದ ಕಾಲೇಜು ಉಪನ್ಯಾಸಕರು, ಸಹಪಾಠಿಗಳು ದಂಗಾಗಿದ್ದಾರೆ.
ಸದ್ಯ ವಿದ್ಯಾರ್ಥಿಯನ್ನು ಸಹ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಕೋಲಾರ ಮಹಿಳಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಇದಕ್ಕೆ ಕಾರಣನಾದ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


