ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಇಸ್ಪೀಟ್ ಆಡುವಾಗ ಪೊಲೀಸರು ಎಂಟ್ರಿ ಕೊಟ್ಟಿದ್ದು, ಪೊಲೀಸರಿಂದ ತಪ್ಪಿಸಿಕೊಳ್ಳಲು ತೆಪ್ಪದ ಮೂಲಕ ಪರಾರಿಯಾಗಲು ಯತ್ನಿಸಿದ ವೇಳೆ ಈ ವೇಳೆ ತೆಪ್ಪ ಮಗುಚಿ ಇಬ್ಬರು ಸಾವನ್ನಪ್ಪಿರುವ ಘಟನೆ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ನಡೆದಿದೆ.
ನಿನ್ನೆ ಸಂಜೆ ಪೊಲೀಸರು ಇಸ್ಪೀಡ್ ಆಡುತ್ತಿದ್ದವರನ್ನು ಹಿಡಿಯಲು ಬಂದಿದ್ದರು. ಇದನ್ನು ತಿಳಿಯುತ್ತಲೇ ಎಂಟು ಮಂದಿ ಇಸ್ಪೀಟ್ ಆಟಗಾರರು ತೆಪ್ಪದಲ್ಲಿ ಕೃಷ್ಣಾ ನದಿ ದಾಟಲು ಹೋಗಿದ್ದಾರೆ. ಆತುರದಲ್ಲಿ ತೆಪ್ಪ ನಡೆಸುವಾಗ ಅದು ಮಗುಚಿಬಿದ್ದಿದೆ. ಈ ವೇಳೆ ನಾಲ್ಕು ಜನರು ನೀರಿನಲ್ಲಿ ಸಿಲುಕಿದ್ದರು. ಅವರನ್ನು ಮೀನುಗಾರರು ಹಾಗೂ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇಬ್ಬರು ಸಾವನ್ನಪ್ಪಿದ್ದಾರೆ.
ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಮೃತಪಟ್ಟವರಾಗಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ನಾಲ್ಕು ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


