ಈ ಹಿಂದೆ ಟ್ವಿಟ್ಟರ್ ‘ಎಕ್ಸ್’ ಪರ್ಯಾಯವಾಗಿ ಆರಂಭಗೊಂಡಿದ್ದ ಕೂ (Koo) ಆ್ಯಪ್ ಅಧಿಕೃತವಾಗಿ ಕಾರ್ಯಾಚರಣೆ ನಿಲ್ಲಿಸಿದೆ ಎಂದು ವರದಿ ತಿಳಿಸಿದೆ.
ದೇಶೀಯ ಸಾಮಾಜಿಕ ಜಾಲತಾಣ ವೇದಿಕೆಯಾಗಿದ್ದ ಈ ಸಂಸ್ಥೆ ಹೆಚ್ಚಿನ ತಂತ್ರಜ್ಞಾನದ ವೆಚ್ಚಗಳಿಂದ ಕೂ ವೇದಿಕೆಯನ್ನು ಮುಚ್ಚುವುದಾಗಿ ಸ್ಥಾಪಕರಾದ ಅಪ್ರಮೇಯ ರಾಧಾಕೃಷ್ಣ ಮತ್ತು ಮಯಾಂಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಇದರ ಜೊತೆಗೆ ಎಲನ್ ಮಸ್ಕ್ ತನ್ನ ‘ಎಕ್ಸ್’ ಸಾಮಾಜಿಕ ಜಾಲತಾಣದ ನಿಯಮಗಳನ್ನು ಸಡಿಲಿಕೆ ಮಾಡಿ ತೀವ್ರ ಪೈಪೋಟಿ ನೀಡಲು ಶುರುಮಾಡಿದ್ದರು.
ಕೂ ಉತ್ತುಂಗದಲ್ಲಿದ್ದಾಗ ಸುಮಾರು 20 ಲಕ್ಷ ದೈನಂದಿನ ಸಕ್ರಿಯ ಬಳಕೆದಾರರನ್ನು ಮತ್ತು 9,000 ವಿಐಪಿಗಳನ್ನು ಒಳಗೊಂಡಂತೆ 1 ಕೋಟಿ ಮಾಸಿಕ ಬಳಕೆದಾರರನ್ನು ಹೊಂದಿತ್ತು. ಕನ್ನಡ ಸೇರಿದಂತೆ ಸ್ಥಳೀಯ ಭಾಷೆಗಳಲ್ಲಿ ಬಳಕೆದಾರರರನ್ನು ಪ್ರೋತ್ಸಾಹಿಸಲು ಮುಂದಾಗಿದ್ದರೂ ಕೂ ಬಳಕೆದಾರರನ್ನು ತಲುಪಲು ವಿಫಲವಾಗಿತ್ತು. ಭವಿಷ್ಯದ ಉದ್ಯಮಗಳ ಬಗ್ಗೆ ನಾವು ಆಶಾವಾದಿಯಾಗಿದ್ದೇವೆ. ಇಲ್ಲಿಯವರೆಗೆ ಸಹಕಾರ ನೀಡಿದ ಬೆಂಬಲಿಗರು, ಹೂಡಿಕೆದಾರರು ಮತ್ತು ಬಳಕೆದಾರರಿಗೆ ಸಂಸ್ಥಾಪಕರು ಕೃತಜ್ಞತೆ ಸಲ್ಲಿಸುತ್ತೇವೆ ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


