ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಮಳೆಗಾಲ ಮುಗಿಯುವವರೆಗೆ ಯಾವುದೇ ಕಟ್ಟಡ ಕಾಮಗಾರಿ ನಡೆಸದಂತೆ ಮಂಗಳೂರು ಪಾಲಿಕೆ ಆಯುಕ್ತ ಸಿ.ಎಲ್.ಆನಂದ್ ಆದೇಶ ನೀಡಿದ್ದಾರೆ.
ನಗರದ ಬಲ್ಮಠ ರೋಡ್ ಸಮೀಪ ನಿರ್ಮಾಣ ಹಂತದ ಕಟ್ಟಡದ ಬಳಿ ಮಣ್ಣು ಕುಸಿದು ಓರ್ವ ಕಾಮಿಕ ಮೃತ್ಯು ಹೊಂದಿದ್ದ. ಈ ಕಾರಣಕ್ಕೆ ಈ ಆದೇಶ ಹೊರಡಿಸಲಾಗಿದೆ. ಹಾಗೂ ಈ ಮೂಲಕ ಕಟ್ಟಡ ನಿರ್ಮಾಣ ಸಂಸ್ಥೆಗಳಿಗೆ ಪಾಲಿಕೆ ಆಯುಕ್ತರಿಂದ ಎಚ್ಚರಿಕೆ ನೀಡಿದ್ದಾರೆ.
ಭೂ ಅಗೆತವನ್ನು ಅವೈಜ್ಞಾನಿಕ ರೀತಿಯಲ್ಲಿ ಮಾಡುವುದು, ಇದರಿಂದ ಜೀವ ಹಾನಿ, ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ಈ ಕಾರಣದಿಂದ ಮಳೆಗಾಲ ಮುಗಿಯುವವರೆಗೆ ಯಾವುದೇ ಕಟ್ಟಡ ನಿರ್ಮಾಣ ಕಾಮಗಾರಿ ಮಾಡಬಾರದು.
ಕಟ್ಟಡ ನಿರ್ಮಾಣ ಕಾಮಗಾರಿಯನ್ನು ನಿಲ್ಲಿಸಬೇಕು. ಇದನ್ನು ಉಲ್ಲಂಘನೆ ಮಾಡಿದ್ದಲ್ಲಿ ವಿಪತ್ತು ನಿರ್ವಹಣೆ ಕಾಯ್ದೆಯಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಈಗಾಗಲೇ ಹವಾಮಾನ ಇಲಾಖೆ ರೆಡ್, ಆರೆಂಜ್, ಎಲ್ಲೋ ಅಲರ್ಟ್ ಬಗ್ಗೆ ನಿರಂತರವಾಗಿ ಮುನ್ಸೂಚನೆ ನೀಡುತ್ತಿದ್ದರೂ ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಕಟ್ಟಡದ ಕಾಮಗಾರಿಯನ್ನು ಮಳೆಗಾಲ ಮುಗಿಯುವವರೆಗೆ ನಡೆಸದಂತೆ ತಿಳಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


