ಜಿಮ್ ಒಂದರ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘ ಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಲ್ಡನ್ ಜಿಮ್ ನಲ್ಲಿ ಈ ಘಟನೆ ನಡೆದಿದ್ದು, 22 ವರ್ಷದ ಶ್ರಾವಣಿ ಸಾವನ್ನಪ್ಪಿದ್ದಾಳೆ.
ಎಂಟನೇ ಮೈಲಿಯಲ್ಲಿರುವ ಗೋಲ್ಡನ್ ಜಿಮ್ ನಲ್ಲಿ ಶ್ರಾವಣಿ ಕೆಲಸ ಮಾಡುತ್ತಿದ್ದಳು. ಎರಡು ದಿನದ ಹಿಂದೆ ಕೆಲಸಕ್ಕೆ ಬಂದಾಗ ಆಕೆ ಜಿಮ್ ನಲ್ಲಿ ವಾಂತಿ ಮಾಡಿಕೊಂಡಿದ್ದಾಳೆ. ಕೂಡಲೇ ಜಿಮ್ ನಲ್ಲಿದ್ದವರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದ್ರೆ ಕೆಲ ಹೊತ್ತಿನ ನಂತರ ಆಕೆ ಮೃತಪಟ್ಟಿದ್ದಾಳೆ. ಪೊಲೀಸರು ತನಿಖೆ ನಡೆಸಿದಾಗ ಆಕೆ ವಿಷ ಸೇವಿಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ.
ಮೃತ ಶ್ರಾವಣಿ ದಾವಣಗೆರೆ ಮೂಲದವಳಾಗಿದ್ದು, ದಾಸರಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಪೋಷಕರು ಮದುವೆ ಮಾಡಲು ತೀರ್ಮಾನ ಮಾಡಿದ್ದರು. ಆದ್ರೆ ಪೋಷಕರು ನೋಡಿದ ಹುಡುಗನನ್ನು ಮದುವೆಯಾಗಲು ಆಕೆ ನಿರಾಕರಿಸಿದ್ದರು . ಆದರೆ ಮಗಳ ಮನವೊಲಿಸಲು ಪೋಷಕರು ಬೆಂಗಳೂರಿಗೆ ಬಮದಿದ್ದರು. ಇದರಿಂದ ನೊಂದು ಸಾವಿಗೆ ಶರಣಾಗಿದ್ದಾಳೆ ಎಂದು ಶಂಕಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


