ವಿವಾಹಿತನ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ ಕಾಲೇಜು ಯುವತಿ ತನ್ನ ಪ್ರಿಯತಮನ ಜೊತೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೈಸ್ ರಸ್ತೆ ಸಮೀಪದ ಕೆರೆಯೊಂದರಲ್ಲಿ ಇಬ್ಬರು ಮೃತದೇಹಗಳು ಪತ್ತೆಯಾಗಿವೆ.
ತಲಘಟ್ಟಪುರದ ಅಂಜನಾಪುರದಲ್ಲಿ ವಾಸವಿದ್ದ ಕಾಲೇಜು ವಿದ್ಯಾರ್ಥಿನಿ ಅಂಜನಾ (20) ಹಾಗೂ ಕೋಣನಕುಂಟೆಯ ಶ್ರೀಕಾಂತ್ (25) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.
ಇವರಿಬ್ಬರೂ ಜುಲೈ 1 ರಂದು ನಾಪತ್ತೆಯಾಗಿದ್ದರು. ಇದೀಗ ಇವರಿಬ್ಬರ ಮೃತದೇಹಗಳು ಕೆರೆಯಲ್ಲಿ ಪತ್ತೆಯಾಗಿವೆ.
ಶ್ರೀಕಾಂತ್ ಗೆ ಈಗಾಗಲೇ ಮದುವೆಯಾಗಿತ್ತು. ಆದರೂ ಅಂಜನಾಳನ್ನು ಪ್ರೀತಿಸುತ್ತಿದ್ದ. ಇಬ್ಬರು ಮದುವೆಯಾಗೋದಕ್ಕೆ ಆಗೋದಿಲ್ಲ ಎಂದು ಅರಿತ ಇಬ್ಬರೂ ಕೆರೆಗೆ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರೂ ಜುಲೈ 1 ರಂದು ನಾಪತ್ತೆಯಾಗಿದ್ದರು. ಹೀಗಾಗಿ ಇಬ್ಬರ ಪೋಷಕರು, ಕೋಣನಕುಂಟೆ ಮತ್ತು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲಿಸಿದ್ದರು.
ಮೃತರ ಮೊಬೈಲ್ ಗಳಲ್ಲಿ ವಿಡಿಯೋ ಮಾಡಲಾಗಿದ್ದು, ಆ ಮೂಲಕ ಇಬ್ಬರೂ ಪ್ರೀತಿಸುತ್ತಿದ್ದ ಅನ್ನೋದು ಗೊತ್ತಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


