ಬೆಂಗಳೂರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ 6 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಬೆಳಗ್ಗೆ ಮೆಜೆಸ್ಟಿಕ್ ರೈಲು ನಿಲ್ದಾಣ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ.
ಮೃತ ಬಾಲಕಿ ಕೂಲಿ ಕೆಲಸ ಮಾಡುವ ದಂಪತಿಯ 6 ವರ್ಷದ ಮಗಳು ಎಂದು ಗೊತ್ತಾಗಿದೆ. ಬಾಲಕಿಯ ಮೈ ಮೇಲೆ ಪರಚಿದ ಗಾಯಗಳು ಹಾಗೂ ರಕ್ತಸಿಕ್ತ ಬಟ್ಟೆಗಳಿಂದ ಬಾಲಕಿ ಶವ ಕಂಡುಬಂದಿದೆ. ಹೀಗಾಗಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ರೈಲ್ವೆ ಪೊಲೀಸರು ಸ್ಥಳಕ್ಕಾಮಿಸಿ ಪರಿಶೀಲನೆ ನಡೆಸಿದ್ದು, ಬಾಲಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಬಗ್ಗೆ ರೈಲ್ವೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


