ಉಡುಪಿಯ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ ಬುಧವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನಳಾಗಿದ್ದಾಳೆ.
ಉಡುಪಿಯ ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ ಮತ್ತು ಚಂದ್ರಿಕಾ ಅವರ ಪುತ್ರಿ ಭಾಗ್ಯಶ್ರೀ (16) ಮೃತ ದುರ್ದೈವಿ. ಈಕೆ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಯಾಗಿದ್ದಾಳೆ.
ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಮುಗ್ಧ ಬಾಲೆ ಭಾಗ್ಯಶ್ರಿಯ ನಿಧನಕ್ಕೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಶಿಕ್ಷಕರು,ವಿದ್ಯಾರ್ಥಿ ವೃಂದದವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಗೌರವಾರ್ಥ ನಿನ್ನೆ ಶಾಲೆಗೆ ರಜೆ ನೀಡಲಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


