ಕರ್ನಾಟಕ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿ ಎಡಿಜಿಪಿ ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿಗೆ ರಾಜ್ಯ ಸರ್ಕಾರ ಅನುಮೋದಿಸಿದೆ. ಡಿಸೆಂಬರ್ 31 ರಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಹುದ್ದೆಯಿಂದ ನಿವೃತ್ತಿ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಸ್ವಂ ಭಾಸ್ಕರ್ ರಾವ್ ಅವರೆ ಧೃಡಪಡಸಿದ್ದು ಸರ್ಕಾರ ಸ್ವಂ ನಿವೃತ್ತಿಗೆ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.
ಪೊಲೀಸ್ ಹುದ್ಧೆಯನ್ನ ತ್ಯಜಿಸಿ ರಾಜಕೀಯಕ್ಕೆ ಬರುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿ . ನಾನು ಅಂತಹ ಯಾವುದೇ ನಿರ್ಧಾರ ಕೈಗೊಂಡಿಲ್ಲ. ನನ್ನ ಕುಟುಂಬದ ಜೊತೆ ಪ್ರಯಾಣಿಸಲು ಅವರ ಜೊತೆ ಸಮಯ ಕಳೆಯಲು ಇಷ್ಟಪಡುತ್ತೇನೆ. ಎಂದು ಅವರು ಹೇಳಿದ್ದಾರೆ.
1990 ರ ಬ್ಯಾಚ್‌ನ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ರಾವ್ ಅವರು ಈ ವರ್ಷದ ಸೆಪ್ಟೆಂಬರ್‌ನಲ್ಲಿ ಸೇವೆಯಿಂದ ಸ್ವಯಂ ನಿವೃತ್ತಿಗೆ (ವಿಆರ್‌ಎಸ್) ಅರ್ಜಿ ಸಲ್ಲಿಸಿದ್ದರು. ಕೂಡಲೇ ಒಪ್ಪಿಗೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು. ಅವರ ಕಡತ ಮುಖ್ಯಮಂತ್ರಿ ಬಳಿ ಬಾಕಿ ಉಳಿದಿದ್ದು, ಇತ್ತೀಚೆಗಷ್ಟೇ ಸಿ ಎಂ ಸಹಿ ಹಾಕಿದ್ದಾರೆ.
1954 ರಲ್ಲಿ ಜನಿಸಿದ್ದ ಭಾಸ್ಕರ್ ರಾವ್ ಬೆಂಗಳೂರು ನಗರದ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಆಂತರಿಕ ಭದ್ರತಾ ವಿಭಾಗದಲ್ಲಿ ಕೂಡ ಕೆಲಸ ನಿರ್ವಹಿಸಿದ್ದರು. ಪ್ರಸ್ತುತ ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy