nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಡೆಂಗ್ಯೂ ನಿಯಂತ್ರಣಕ್ಕೆ ಪ್ರತಿ ಮನೆಯಲ್ಲೂ ಅರಿವು ಮೂಡಿಸಲು ಸೂಚನೆ
    ತುಮಕೂರು July 4, 2024

    ತುಮಕೂರು: ಡೆಂಗ್ಯೂ ನಿಯಂತ್ರಣಕ್ಕೆ ಪ್ರತಿ ಮನೆಯಲ್ಲೂ ಅರಿವು ಮೂಡಿಸಲು ಸೂಚನೆ

    By adminJuly 4, 2024No Comments2 Mins Read
    tumakuru

    ತುಮಕೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಡೆಂಗ್ಯೂ ರೋಗ ನಿಯಂತ್ರಣದ ಬಗ್ಗೆ ಮನೆ–ಮನೆಗೂ ಭೇಟಿ ನೀಡಿ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಎನ್. ಮಂಜುನಾಥ್ ಅವರಿಗೆ ಸೂಚನೆ ನೀಡಿದರು.

    ಬೆಂಗಳೂರಿನ ವಿಕಾಸಸೌಧದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು, ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಪಾಲ್ಗೊಂಡ ನಂತರ ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಗುರುವಾರ ಸಂಜೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಆರೋಗ್ಯ ಇಲಾಖೆ ಅಧಿಕಾರಿ/ ಸಿಬ್ಬಂದಿ, ಆಶಾ/ ಅಂಗನವಾಡಿ ಕಾರ್ಯಕರ್ತೆಯರು, ಸ್ವ-ಸಹಾಯ ಗುಂಪು, ಸ್ವಯಂ ಸೇವಾ ಸಂಘಗಳನ್ನು ತೊಡಗಿಸಿಕೊಂಡು ನಗರ ಸೇರಿದಂತೆ ಗ್ರಾಮೀಣ ಪ್ರದೇಶದ ಎಲ್ಲಾ ಮನೆಗಳಿಗೂ ಭೇಟಿ ನೀಡಿ ಡೆಂಗ್ಯೂ ರೋಗ ಲಕ್ಷಣ ಹಾಗೂ ಡೆಂಗ್ಯೂ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜನಜಾಗೃತಿ ಮೂಡಿಸಬೇಕೆಂದು ನಿರ್ದೇಶನ ನೀಡಿದರು.


    Provided by
    Provided by

    ಡೆಂಗ್ಯೂ ರೋಗದ ಪ್ರಕರಣಗಳ ಸಂಖ್ಯೆ ಆಗಸ್ಟ್–ಸೆಪ್ಟೆಂಬರ್ ಮಾಹೆಯಲ್ಲಿ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಶಾಲೆಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಜನವಸತಿ ಪ್ರದೇಶಗಳಲ್ಲಿ ವಾರಕ್ಕೆರಡು ಬಾರಿ ಕಡ್ಡಾಯವಾಗಿ ಫಾಗಿಂಗ್ ಮಾಡಬೇಕು ಹಾಗೂ ಪ್ರತಿ ಶುಕ್ರವಾರ ಲಾರ್ವಾ ಸಮೀಕ್ಷೆ ನಡೆಸಬೇಕು. ಡೆಂಗ್ಯೂ ದೃಢಪಟ್ಟ ಪ್ರಕರಣಗಳಲ್ಲಿ ಯಾವುದೇ ಸಾವು ಸಂಭವಿಸದಂತೆ ಮುನ್ನೆಚ್ಚರಿಕೆವಹಿಸಬೇಕು ಎಂದು ಸೂಚಿಸಿದರು.

    ಮನೆ–ಮನೆ ಭೇಟಿ ಸಂದರ್ಭದಲ್ಲಿ ಜ್ವರದ ಲಕ್ಷಣಗಳು ಕಂಡು ಬಂದರೆ ವೈದ್ಯರ ಬಳಿ ಚಿಕಿತ್ಸೆ ಪಡೆಯುವ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಡೆಂಗೀ ಜ್ವರಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗಳಲ್ಲಿ ರಕ್ತಪರೀಕ್ಷೆಗೆ ರೋಗಿಗಳಿಂದ ಸರ್ಕಾರ ನಿಗದಿಪಡಿಸಿರುವ ದರವನ್ನಷ್ಟೇ ಪಡೆಯಬೇಕು ಎಂದು ಸೂಚನೆ ನೀಡಿದರು.

    ಜ್ವರಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗೆ ಬರುವ ರೋಗಿಗಳನ್ನು ಕಡ್ಡಾಯವಾಗಿ ಸಿಬಿಸಿ(Complete Blood Count)  ಪರೀಕ್ಷೆಗೊಳಪಡಿಸಬೇಕೆಂದು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ, ಡೆಂಗ್ಯೂ ದೃಢಪಟ್ಟು ಜಿಲ್ಲಾಸ್ಪತ್ರೆಯಲ್ಲಿ ದಾಖಲಾದ ರೋಗಿಗಳ ಬಗ್ಗೆ  ಮಾಹಿತಿ ಪಡೆದರು.

    ಪಾಲಿಕೆ ವ್ಯಾಪ್ತಿಯಲ್ಲಿ ೫೨ ಡೆಂಗ್ಯೂ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯ ಇತರೆ ತಾಲ್ಲೂಕುಗಳಿಗೆ ಹೋಲಿಸಿದಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಹೆಚ್ಚಿನ ಡೆಂಗ್ಯೂ ಪ್ರಕರಣಗಳು ದೃಢಪಟ್ಟಿರುವುದರಿಂದ ಎಲ್ಲಾ ವಾರ್ಡ್ಗಳಲ್ಲಿ ಪ್ರತಿ ದಿನ ಫಾಗಿಂಗ್ ಮಾಡಬೇಕು. ಚರಂಡಿಗಳಲ್ಲಿ ನೀರು ನಿಲ್ಲದಂತೆ ನೈರ್ಮಲ್ಯತೆ ಕಾಪಾಡಬೇಕೆಂದು ಪಾಲಿಕೆ ಆರೋಗ್ಯ ಅಧಿಕಾರಿ ಡಾ: ವೀರೇಶ್ ಕಲ್ಮಟ್ ಅವರಿಗೆ ಸೂಚನೆ ನೀಡಿದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಎನ್. ಮಂಜುನಾಥ್ ಮಾತನಾಡಿ, ಜಿಲ್ಲೆಯಲ್ಲಿ ಡೆಂಗ್ಯೂ ರೋಗದಿಂದ ಯಾವುದೇ ಸಾವು-ನೋವು ಸಂಭವಿಸಿಲ್ಲ. ಡೆಂಗ್ಯೂ ರೋಗ ದೃಢಪಟ್ಟು ಜಿಲ್ಲಾಸ್ಪತ್ರೆಯಲ್ಲಿ ೩ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ೩೦೮೨ ಶಂಕಿತ ಡೆಂಗ್ಯೂ ರೋಗಿಗಳ ಪೈಕಿ ೧೫೪೨ ರೋಗಿಗಳಿಂದ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗಿದ್ದು, ೧೭೦ ರೋಗಿಗಳಲ್ಲಿ ಡೆಂಗ್ಯೂ ದೃಢಪಟ್ಟಿದೆ ಎಂದು ಮಾಹಿತಿ ನೀಡಿದರು.

    ಜಿಲ್ಲಾ ಮಲೇರಿಯಾ ಅಧಿಕಾರಿ ಡಾ: ಚಂದ್ರಶೇಖರ್ ಮಾತನಾಡಿ, ಮಹಾನಗರಪಾಲಿಕೆ/ ಪಟ್ಟಣ ಪಂಚಾಯತಿ/ ಪುರಸಭೆ ಸಹಯೋಗದಲ್ಲಿ ಪ್ರತಿ ೧ನೇ ಹಾಗೂ ೩ನೇ ಶುಕ್ರವಾರಗಳಂದು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳೊAದಿಗೆ ಲಾರ್ವಾ ಸಮೀಕ್ಷೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಡೆಂಗ್ಯೂ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರಲ್ಲದೆ, ಡೆಂಗ್ಯೂ ರೋಗವು ಸೊಳ್ಳೆಗಳಿಂದ ಹರಡುವುದರಿಂದ ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ನೀರಿನ ಸಂಗ್ರಹವನ್ನು ಭದ್ರವಾಗಿ ಮುಚ್ಚಿಡಬೇಕೆಂದು ಜನರಲ್ಲಿ ಜಾಗೃತಿ ಮೂಡಿಸಲಾಗಿದೆ.  ಜನವಸತಿ ಪ್ರದೇಶಗಳ ಸುತ್ತ-ಮುತ್ತ ಇರುವ ಕೆರೆ-ಕಟ್ಟೆ, ಕಲ್ಯಾಣಿ, ಬಾವಿ, ಕೃಷಿಹೊಂಡ ಮತ್ತಿತರ ಜಲಸಂಗ್ರಹಾಗಾರಗಳಿಗೆ ಲಾರ್ವಾಹಾರಿ ಮೀನಿನ ಮರಿಗಳನ್ನು ಬಿಟ್ಟು ಅಭಿವೃದ್ಧಿಪಡಿಸಿ ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟಲಾಗುತ್ತಿದೆ ಎಂದು ವಿವರಿಸಿದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜಿನಪ್ಪ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.