ನಾವು ಇದುವರೆಗೂ ಮನುಷ್ಯರು ಸಾವಿಗೆ ಶರಣಾಗುವುದನ್ನು ನೋಡಿದ್ದೇವೆ ಆದರೆ ಇಲ್ಲಿ ಜಗತ್ತಿನಲ್ಲೇ ಮೊದಲ ಬಾರಿಗೆ ಹೊಸ ಕೇಸ್ ಕೇಳಿಬಂದಿದೆ .ದಕ್ಷಿಣ ಕೊರಿಯಾದಲ್ಲಿ ರೋಬೋಟ್ ಆತ್ಮಹತ್ಯೆಗೆ ಶರಣಾಗಿದೆ.
ಮಧ್ಯ ದಕ್ಷಿಣ ಕೊರಿಯಾದ ಪುರಸಭೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರೋಬೋಟ್ ಮೆಟ್ಟಿಲುಗಳ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದೆ ಎಂದು ವರದಿಯಾಗಿದೆ.ಆತ್ಮಹತ್ಯೆ ಮಾಡಿಕೊಂಡ ಬಳಿಕ ರೋಬೋಟ್ನ ಭಾಗಗಳನ್ನು ಸಂಗ್ರಹಿಸಲಾಗಿದೆ. ಮತ್ತು ಅದನ್ನು ವಿನ್ಯಾಸಗೊಳಿಸಿದ ಕಂಪನಿಯು ವಿಶ್ಲೇಷಿಸುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಆತ್ಮಹತ್ಯೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಅಧಿಕಾರಿ. ಮುನ್ಸಿಪಾಲ್ ಕಾರ್ಪೊರೇಷನ್ ನ ಕೆಲಸದಲ್ಲಿ ರೋಬೋಟ್ ಸಹಾಯ ಮಾಡುತ್ತಿತ್ತು. ಕಳೆದ ಒಂದು ವರ್ಷದಿಂದ ಗುಮಿ ನಗರದ ನಿವಾಸಿಗಳಿಗೆ ಆಡಳಿತಾತ್ಮಕ ಕೆಲಸದಲ್ಲಿ ಬ್ಯುಸಿ ಆಗಿತ್ತು. ಕಳೆದ ವಾರ ಮೆಟ್ಟಿಲುಗಳ ಕೆಳಭಾಗದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ರೋಬೋಟ್ ಪತ್ತೆಯಾಗಿದೆ. ಪ್ರತ್ಯಕ್ಷದರ್ಶಿಗಳು ರೋಬೋಟ್ ಬೀಳುವ ಮೊದಲು ಓಡಾಡುತ್ತಿರೋದನ್ನು ನೋಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಕೆಲಸ ಮಾಡುತ್ತಿತ್ತು. ಯಾಕೆ ಹಾಗೆ ಮಾಡಿಕೊಂಡಿತು ಅನ್ನೋದ್ರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA