ಇನ್ನು ಮುಂದೆ KSRTC ಯಲ್ಲೂ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಮೂಲಕ ಹಣ ಪಾವತಿಸಲು ಪ್ರಯಾಣಿಕರಿಗೆ ಅವಕಾಶ ಕಲ್ಪಿಸುವ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದೆ.
ಖಾಸಗಿ ಕಂಪೆನಿಯಿಂದ ಒಂದು ಮಷಿನ್ ಗೆ ಪ್ರತಿ ತಿಂಗಳು 645 ರೂಪಾಯಿ ಬಾಡಿಗೆ ಆಧಾರದಲ್ಲಿ 10,245 ಸಾವಿರ ಇಟಿಎಂ ಟಿಕೆಟ್ ಮಷಿನ್ ಗಳ ಖರೀದಿಗೆ ಕೆಎಸ್ ಆರ್ ಟಿಸಿ ಮುಂದಾಗಿದೆ. ಇದರಿಂದ ಇನ್ಮುಂದೆ ಕೆಎಸ್ ಆರ್ ಟಿಸಿ ಬಸ್ನಲ್ಲಿ ಗೂಗಲ್ ಪೇ, ಫೋನ್ ಪೇ. ಪೇಟಿಎಂ ಮೂಲಕ ಹಣ ಪಾವತಿ ಮಾಡಿ ಟಿಕೆಟ್ ಪಡೆದು ಪ್ರಯಾಣಿಸಬಹುದಾಗಿದೆ.
ಈ ನೂತನ ಮಷಿನ್ ಗಳಲ್ಲಿ ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ಗಳನ್ನು ಬಳಸಿಯೂ ಹಣ ಪಾವತಿ ಮಾಡಬಹುದು ಎನ್ನಲಾಗಿದೆ. ಸದ್ಯ ಈಗ ಇರುವ ಮಷಿನ್ಗಳು ರೋಡ್ ಮಧ್ಯೆ ಕೈಕೊಟ್ಟು ಪ್ರಯಾಣಿಕರು ಮತ್ತು ಕಂಡಕ್ಟರ್ ಜೊತೆಗೆ ಜಗಳವಾಗುತ್ತಿದೆ. ಹೊಸ ಮಷಿನ್ನಿಂದ ಇದು ತಪ್ಪಲಿದೆ ಎಂದು ನಿಗಮ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


