ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣರನ್ನು ಎಸ್ ಐಟಿ ಅಧಿಕಾರಿಗಳು ಪುರುಷತ್ವ ಪರೀಕ್ಷೆಗೊಳಪಡಿಸಿದ್ದರು. ಅದರ ಫಲಿತಾಂಶ ಈಗ ಬಂದಿದೆ.
ಸದ್ಯಕ್ಕೆ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮೇ 31 ರಂದು ಅವರನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದರು. ಪುರುಷತ್ವ ಪರೀಕ್ಷಾ ವರದಿ ಈಗ ಎಸ್ ಐಟಿ ಅಧಿಕಾರಿಗಳ ಕೈ ಸೇರಿದೆ ಎನ್ನಲಾಗಿದೆ.
ಕೆಲವು ದಿನಗಳ ಹಿಂದೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಜ್ವಲ್ ಪರೀಕ್ಷೆ ನಡೆಸಲಾಗಿತ್ತು. ಪ್ರಜ್ವಲ್ ರೇವಣ್ಣ ವಿರುದ್ಧವಾಗಿ ಈ ಪುರುಷತ್ವ ಪರೀಕ್ಷೆ ಸಾಕ್ಷಿಯಾಗಿ ಬಳಕೆಯಾಗಲಿದೆ. ಇದಲ್ಲದೆ ಧ್ವನಿ ಪರೀಕ್ಷೆ ಕೂಡಾ ಮಾಡಲಾಗಿದ್ದು, ಅದರ ಫಲಿತಾಂಶ ಇನ್ನಷ್ಟೇ ಬರಬೇಕಿದೆ. ಕಿರುಕುಳ ನೀಡಿದ್ದ ಮಹಿಳೆ ತನಗೆ ಪರಿಚಯವೇ ಇಲ್ಲ ಎಂದು ಪ್ರಜ್ವಲ್ ಹೇಳಿಕೊಂಡಿದ್ದರು. ಆದರೆ ಇದೀಗ ಈ ಪರೀಕ್ಷೆ ಫಲಿತಾಂಶಗಳು ಪ್ರಜ್ವಲ್ ಗೆ ಮುಳುವಾಗಲಿದೆ.
ಇದೀಗ ಪ್ರಜ್ವಲ್ ರೇವಣ್ಣ ಪುರುಷತ್ವ ಪರೀಕ್ಷೆಯಲ್ಲಿ ಪಾಸಾಗಿದ್ದು ದೈಹಿಕ ಸಂಪರ್ಕರ ನಡೆಸಲು ಸಮರ್ಥ ಎಂದು ವರದಿ ಬಂದಿದೆ ಎಂದು ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


