ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆಗಸ್ಟ್ ವೇಳೆಗೆ ಪತನವಾಗಬಹುದು. ಅವಧಿಗೂ ಮುನ್ನ ಚುನಾವಣೆಗೆ ಸಿದ್ಧರಾಗುವಂತೆ ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಎಲ್ಲಾ ಪಕ್ಷದ ಕಾರ್ಯಕರ್ತರು ಚುನಾವಣೆಗೆ ಸಿದ್ಧರಾಗಿರಲು ನಾನು ಮನವಿ ಮಾಡುತ್ತೇನೆ. ದೆಹಲಿಯಲ್ಲಿ ಮೋದಿ ಸರ್ಕಾರವು ತುಂಬಾ ದುರ್ಬಲವಾಗಿದೆ. ಆಗಸ್ಟ್ ವೇಳೆಗೆ ಈಗಿನ ಸರ್ಕಾರ ಪತನವಾಗಬಹುದು, ಯಾವುದಕ್ಕೂ ಚುನಾವಣೆಗೆ ಸಿದ್ಧ ಇರಿ ಎಂದು ಲಾಲೂ ಯಾದವ್ ಹೇಳಿದ್ದು, ಇದೀಗ ಅವರ ಹೇಳಿಕೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.
ತಂದೆಯ ಮಾತಿನ ಬೆನಲ್ಲೇ ಲಾಲೂ ಯಾದವ್ ಮಗ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಕೂಡ ಬಿಹಾರದಲ್ಲಿ ಶೀಘ್ರ ವಿಧಾನಸಭಾ ಚುನಾವಣೆಯ ಸಾಧ್ಯತೆಯನ್ನು ಸೂಚಿಸಿದ್ದಾರೆ.
ಡಿಸೆಂಬರ್ 2024 ಅಥವಾ 2025ರ ಆರಂಭದಲ್ಲಿ ಚುನಾವಣೆ ನಡೆದರೂ ಬಿಹಾರದಲ್ಲಿ ಇಂಡಿಯಾ ಮೈತ್ರಿ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


