ಪಂಜಾಬ್ ನ ಶಿವಸೇನೆ ಮುಖಂಡನ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಲುಧಿಯಾನದಲ್ಲಿ ನಡೆದ್ದು, ಗಾಯಗೊಂಡಿರುವ ಶಿವಸೇನಾ ಮುಖಂಡರನ್ನು ಸಂದೀಪ್ ಥಾಪರ್ ಎಂದು ಗುರುತಿಸಲಾಗಿದೆ.
ಸಂದೀಪ್ ಥಾಪರ್ ಅವರು ಟ್ರಸ್ಟ್ ನ ಸಂಸ್ಥಾಪಕ–ಅಧ್ಯಕ್ಷ ರವೀಂದರ್ ಅರೋರಾ ಅವರ ನಾಲ್ಕನೇ ಪುಣ್ಯಸ್ಮರಣೆಯ ಸಮಾರಂಭದಲ್ಲಿ ಭಾಗವಹಿಸಿ ವಾಪಸ್ ಆಗುತ್ತಿದ್ದ ವೇಳೆ ನಡುರಸ್ತೆಯಲ್ಲಿಯೇ ನಾಲ್ವರು ಅಪರಿಚಿತ ವ್ಯಕ್ತಿಗಳು ಕತ್ತಿಗಳಿಂದ ಹಲ್ಲೆ ನಡೆಸಿದ್ದಾರೆ.
ಥಾಪರ್ ಆಸ್ಪತ್ರೆಯಿಂದ ಹೊರ ಬಂದ ಸಂದೀಪ್ ಥಾಪರ್‌ನನ್ನು ರನ್ನು ದುಷ್ಕರ್ಮಿಗಳು ಹಿಂಬಾಲಿಸಿದ್ದು, ಅದಾದ ಬಳಿಕ ಒಬ್ಬ ಕತ್ತಿಯಿಂದ ಥಾಪರ್ ತಲೆಯ ಮೇಲೆ ಬಿಡದೇ ಹೊಡೆದಿದ್ದಾನೆ. ಥಾಪರ್ ಕೈ ಜೋಡಿಸಿ ಬಿಟ್ಟು ಬಿಡಿ ಎಂದು ಅಂಗಾಲಾಚುತ್ತಿದ್ದರೂ ಅದನ್ನು ಲೆಕ್ಕಿಸದೇ ಆತನ ಮೇಲೆ ನಿರಂತರ ದಾಳಿ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.
ಮತ್ತೊಬ್ಬ ಕತ್ತಿಯಿಂದ ದಾಳಿ ಮುಂದುವರಿಸಿದಾಗ ಶಿವಸೇನಾ ಪಂಜಾಬ್ ನಾಯಕ ಬ್ಯಾಲೆನ್ಸ್ ಕಳೆದುಕೊಂಡು ಸ್ಕೂಟರ್ ಸಮೇತ ರಸ್ತೆಯಲ್ಲಿ ಬಿದ್ದಿದ್ದಾರೆ. ಅದಾದ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಮಾರಾಣಾಂತಿಕ ಹಲ್ಲೆಯಿಂದಾಗಿ ಥಾಪರ್ ಅವರ ತಲೆಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ದಾಳಿ ನಡೆದಾಗ ಥಾಪರ್ ಅವರ ಭದ್ರತಾ ಸಿಬ್ಬಂದಿ ಸ್ಥಳದಲ್ಲಿಯೇ ಇದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA