ಬೆಂಗಳೂರು: 3 ವರ್ಷದ ಬಾಲಕಿ ಮೇಲೆ ಶಿಕ್ಷಕಿಯೇ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ವರದಿಯಾಗಿದ್ದು, ವೆಂಕಟೇಶ್ವರಪುರದ ಅನ್ವರ್ ಲೇಔಟ್ ನ ಶಾಲೆಯೊಂದರ ಬಾಲಕಿಯ ಮೇಲೆ ಈ ಕೃತ್ಯ ನಡೆದಿದೆ ಎನ್ನಲಾಗಿದೆ.
ಲೈಂಗಿಕ ದೌರ್ಜನ್ಯದ ಪರಿಣಾಮ ಮಗುವಿನ ಖಾಸಗಿ ಭಾಗದಲ್ಲಿ ರಕ್ತಸ್ರಾವವಾಗಿ ಮಗು ನಡೆಯಲು ಆಗದೆ ಕಷ್ಟ ಪಡುತ್ತಿತ್ತು. ಅಷ್ಟೇ ಅಲ್ಲದೇ ಶಾಲೆಗೆ ಹೋಗುವುದಿಲ್ಲ ಎಂದು ರಚ್ಚೆ ಹಿಡಿತಿತ್ತು.
ಇದನ್ನು ಗಮನಿಸಿದ ಪೋಷಕರು ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಗಮನಕ್ಕೆ ಬಂದಿದೆ ಎಂದು ವರದಿಯಾಗಿದೆ.
ಇದೀಗ ಪೋಷಕರು ಕೆ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು, ಆರೋಪಿ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ ಎಂದು ವರದಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


