ಕನ್ನಡದ ಸುದ್ದಿ ವಾಹಿನಿಯೊಂದರಲ್ಲಿ ನಿರೂಪಕಿಯಾಗಿ, ಚಿತ್ರ ವಿಚಿತ್ರ ಹಾವಭಾವಗಳಿಂದಲೇ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗುತ್ತಿದ್ದ ದಿವ್ಯಾ ವಸಂತ ಅವರೀಗ ಹನಿ ಟ್ರಾಪ್ ರೀತಿ ಮಾಡಿ, ಸುಲಿಗೆಗೆ ಯತ್ನಿಸಿದ್ದರು ಎಂಬ ಆರೋಪ ಎದುರಿಸುತ್ತಿದ್ದಾರೆ.
ದಿವ್ಯಾ ವಸಂತ ಇದೀಗ ಸುಲಿಗೆ ಪ್ರಕರಣಣವೊಂದರಲ್ಲಿ ಸಿಕ್ಕಿ ಬಿದ್ದಿದ್ದು, ಹನಿ ಟ್ರ್ಯಾಪ್ ರೀತಿ ಮಾಡಿ ದುಡ್ಡು ವಸೂಲಿ ಮಾಡಲು ಟ್ರೈ ಮಾಡುತ್ತಿದ್ದರೆನ್ನಲಾಗುತ್ತಿದೆ.
6 ತಿಂಗಳ ಹಿಂದೆ ದಿವ್ಯಾ ಸವಂತ್ ಖಾಸಗಿ ಸುದ್ದಿ ವಾಹಿನಿಯಲ್ಲಿ ನಿರೂಪಕಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಗಿಚ್ಚಿ ಗಿಲಿಗಿಲಿ ಕಾರ್ಯಕ್ರಮದಲ್ಲಿ ಸ್ಪರ್ಧಿಸಿದ ನಂತರ ಯೂಟ್ಯೂಬ್ ಚಾನೆಲ್ ಸಹ ಆರಂಭಿಸಿದ್ದರು. ಫೇಸ್‌ಬುಕ್, ಇನ್‌ಸ್ಟಾಗ್ರಾಂ ಹಾಗೂ ಬೇರೆ ಬೇರೆ ಸಾಮಾಜಿಕ ಜಾಲತಾಣಗಳ ಮೂಲಕ ಸಂಪಾದನೆ ಶುರು ಮಾಡಿಕೊಂಡಿದ್ದರು.
ದಿವ್ಯಾ ವಸಂತ್ ಸುಲಭವಾಗಿ ಹಣ ಸಂಪಾದಿಸಲು ಅಡ್ಡ ದಾರಿ ತುಳಿದು ಸಂಕಷ್ಟಕ್ಕೆ ತುತ್ತಾಗಿದ್ದಾಳೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಕೆಲವು ಸ್ನೇಹಿತರ ಜೊತೆಗೂಡಿ ಸ್ಪಾ ಹಾಗೂ ಪ್ರತಿಷ್ಠಿತ ವೈದ್ಯರನ್ನು ವಂಚಿಸಿ, ಸುಲಿಗೆ ಮಾಡಲು ಯತ್ನಿಸುತ್ತಿದ್ದ ಆರೋಪ ಇವರ ಮೇಲಿದೆ.
ಶ್ರೀಮಂತರು, ಮಸಾಜ್ ಪಾರ್ಲರ್‌ಗಳು ಹಾಗೂ ವೈದ್ಯರೇ ಈ ಗ್ಯಾಂಗ್‌ನ ಟಾರ್ಗೆಟ್ ಆಗಿದ್ದರು. ಹನಿಟ್ರ್ಯಾಪ್ ರೀತಿ ಹಣವುಳ್ಳವರನ್ನು ಬಲೆಗೆ ಬೀಳಿಸಿ ಸುಲಿಗೆ ಮಾಡುತ್ತಿದ್ದರು ಎಂದು ಪೊಲೀಸರ ತನಿಖೆ ವೇಳೆ ಗೊತ್ತಾಗಿದೆ. 100ಕ್ಕೂ ಹೆಚ್ಚು ಜನರನ್ನು ವೆಂಕಟೇಶ್ ಹಾಗೂ ದಿವ್ಯಾ ತಂಡ ಸುಲಿಗೆ ಮಾಡಿರುವ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ಆನ್‌ಲೈನ್‌ನಲ್ಲಿ ಇವರಿಬ್ಬರ ಖಾತೆಗಳಿಗೆ 50 ಸಾವಿರದಿಂದ 1 ಲಕ್ಷದವರೆಗೆ ಹಣ ವರ್ಗಾವಣೆಯಾಗಿದೆ.
ಬೆಂಗಳೂರಿನ ಇಂದಿರಾನಗರ ‘ಸ್ಪಾ’ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರೂ ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ‘ರಾಜ್ ನ್ಯೂಸ್ ಕನ್ನಡ’ ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸೇರಿ ಇಬ್ಬರನ್ನು ಜಿ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ. ಸುದ್ದಿವಾಹಿನಿಯ ಸಿಇಒ ರಾಜಾನುಕುಂಟೆ ವೆಂಕಟೇಶ್ ಹಾಗೂ ನಿರೂಪಕಿ ದಿವ್ಯಾ ವಸಂತಾ ಸೋದರ ಸಂದೇಶ್ ಬಂಧಿತರಾಗಿದ್ದು, ಆರೋಪಿಗಳಿಂದ 3 ಮೊಬೈಲ್ ಜಪ್ತಿ ಮಾಡಲಾಗಿದೆ.
ವಾಟ್ಸ್ ಆಪ್‌ನಲ್ಲಿ ‘ಸೈ ರಿಸರ್ಚ್ ಟೀಂ’ ಹೆಸರಿನ ಗ್ರೂಪ್ ಅನ್ನು ವೆಂಕಟೇಶ್ ಹಾಗೂ ದಿವ್ಯಾ ಮಾಡಿಕೊಂಡಿದ್ದರು. ಈ ಗ್ರೂಪ್‌ನಲ್ಲಿ ತಮ್ಮ ಕಾರ್ಯಸೂಚಿಗಳ ಬಗ್ಗೆ ಆರೋಪಿಗಳು ಚರ್ಚಿಸುತ್ತಿದ್ದರು ಎಂದು ಮೂಲಗಳು ಹೇಳಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


