ತುಮಕೂರು : ಜಿಲ್ಲೆಯ ಪಾವಗಡ ತಾಲೂಕು ಅರಸೀಕೆರೆ ಗ್ರಾಮದ ಬಳಿ ಆಟೋ ಪಲ್ಟಿಯಾಗಿ ಏಳು ಮಂದಿಗೆ ಗಂಭೀರ ಗಾಯಗಳಾಗಿರೋ ಘಟನೆ ನಡೆದಿದೆ.
ಕೂಲಿ ಕೆಲಸಕ್ಕೆ ಹೋಗಿ ಮರಳಿ ತಮ್ಮ ಮನೆಗಳಿಗೆ ಆಟೋದಲ್ಲಿ ತೆರಳುವ ಸಂದರ್ಭದಲ್ಲಿ ಕೂಲಿ ಕಾರ್ಮಿಕರು ಪ್ರಯಾಣ ಬೆಳೆಸಿದ್ದ ಆಟೋ ಪಲ್ಟಿಯಾಗಿದೆ.
ಘಟನೆಯಲ್ಲಿ ಸುಮಾರು ಏಳು ಜನರಿಗೆ ಗಾಯಗಳಾಗಿದ್ದು ಇವರ ಪೈಕಿ ಐದು ಜನರನ್ನು ಆಂಬ್ಯುಲೆನ್ಸ್ ಮೂಲಕ ಪಾವಗಡ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನಿಬ್ಬರು ಮಂಗಳವಾಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರ ಪೈಕಿ ಗಂಭೀರ ಸ್ಥಿತಿಯಲ್ಲಿದ್ದ ಮೂರು ಜನರನ್ನು ಹೆಚ್ಚಿನ ಚಿಕಿತ್ಸೆಗೆ ತುಮಕೂರಿಗೆ ರವಾನಿಸಲಾಗಿದೆ. ಈ ಸಂಬಂಧ ಅರಸೀಕೆರೆ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA