ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರು ನಗರ ಕೇಂದ್ರೀಯ ವಿಭಾಗದಿಂದ 2023-24 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಫಾರ್ಸಿ ಜನಾಂಗದವರಿಗೆ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ನಿಗಮದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಅರಿವು ವಿದ್ಯಾಭ್ಯಾಸ ಯೋಜನೆಯಡಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಇ, ವಿಐಎ, ಸಿಇಟಿ/ ನೀಟ್ ಮುಖಾಂತರ ಎಂಬಿಬಿಎಸ್, ಬಿಡಿಎಸ್, ಆಯುಷ್, ಬ್ಯಾಚುಲರ್ ಆಫ್ ಆರ್ಚ್, ಇಂಜಿನಿಯರಿಂಗ್, ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಫಾರ್ಮಸಿ, ಅಕ್ರಿಕಲ್ಚರ್ ಸೈನ್ಸ್, ವೆಟರಿನರಿ, ಫಾರ್ಮಾ ಸೈನ್ಸ್, ಎಲ್‍ಎಲ್‍ಬಿ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ “ಅರಿವು” ಯೋಜನೆಯಡಿಯಲ್ಲಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್‍ನಲ್ಲಿ ನಿಗಮದ ಜಾಲತಾಣ https://kmdconline.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 7 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ: 080-22114815ಗೆ ಮತ್ತು ಹೆಲ್ಪ್‍ಲೈನ್ ಸಂಖ್ಯೆ: 8277799990ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


