ಬೆಂಗಳೂರಿನ ಮಂಜುನಾಥ ನಗರದ ಪಿಜಿಯಲ್ಲಿ ವಿದ್ಯಾರ್ಥಿಯೋರ್ವ ಮೊಬೈಲ್ ಚಾರ್ಜ್ ಮಾಡುವ ಸಂದರ್ಭ ಚಾರ್ಜರ್‌ನಲ್ಲಿ ವಿದ್ಯುತ್ ಪ್ರವಾಹಿಸಿ ದುರಂತ ಸಾವಿಗೀಡಾಗಿದ್ದಾನೆ.
ಮೃತ ವಿದ್ಯಾರ್ಥಿಯನ್ನು ಶ್ರೀನಿವಾಸ್ (24) ಎಂದು ಗುರುತಿಸಲಾಗಿದೆ. ಶಿಕ್ಷಣಕ್ಕಾಗಿ ಬೀದರ್ ನಿಂದ ಬೆಂಗಳೂರಿಗೆ ಬಂದು ಸಾಫ್ಟ್‌ವೇರ್ ಕೋರ್ಸ್ ಮಾಡುತ್ತಿದ್ದ ಶ್ರೀನಿವಾಸ್ ಶುಕ್ರವಾರ ರಾತ್ರಿ ಮೊಬೈಲ್ ಚಾರ್ಜ್ ಹಾಕಲು ಹೋದಾಗ ಎಲೆಕ್ಟ್ರಿಕ್ ಶಾಕ್ ಹೊಡೆದಿದ್ದು, ಚಾರ್ಜಿಂಗ್ ವೈರ್ ಅಥವಾ ಸ್ವಿಚ್ ಬೋರ್ಡ್‌ನಿಂದ ವಿದ್ಯುತ್ ತಗುಲಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.
ಈತ ಬಳಸುತ್ತಿದ್ದ ಮೊಬೈಲ್ ಚಾರ್ಜರ್ ವೈರ್ ಕೂಡ ಡ್ಯಾಮೇಜ್ ಆಗಿತ್ತು ಎನ್ನಲಾಗಿದೆ. ವಿದ್ಯುತ್ ಶಾಕ್‌ನಿಂದ ಶ್ರೀನಿವಾಸ್ ನೆಲಕ್ಕೆ ಬಿದ್ದಿದ್ದು, ರಾತ್ರಿ ಪಿಜಿಯಲ್ಲಿ ಊಟದ ಸಮಯದಲ್ಲಿ ಪಕ್ಕದ ರೂಮ್ ನ ವಿದ್ಯಾರ್ಥಿ ಊಟಕ್ಕೆ ಬಾ ಎಂದು ಕರೆಯಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಪಿಜಿ ಸಿಬ್ಬಂದಿ ತಕ್ಷಣ ಬಸವೇಶ್ವರ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಮೃತದೇಹವನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಸ್ಥಳಕ್ಕೆ ವಿಧಿವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


