ಗುಜರಾತ್ ನ ಸೂರತ್ ನಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದ ಘಟನೆ ನಡೆದಿದ್ದು, ಏಳು ಜನರ ಶವಗಳು ಪತ್ತೆಯಾಗಿವೆ. ಎನ್ ಡಿಆರ್ ಎಫ್ ಸೇರಿದಂತೆ ತಂಡ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದೆ. ಅಪಘಾತದಲ್ಲಿ ಒಬ್ಬ ವ್ಯಕ್ತಿಯನ್ನು ಗಾಯಗಳೊಂದಿಗೆ ರಕ್ಷಿಸಲಾಗಿದೆ. ಅಪಘಾತಕ್ಕೆ ಕಾರಣ ಸ್ಪಷ್ಟವಾಗಿಲ್ಲ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಗಾರ್ಮೆಂಟ್ಸ್ ಕಾರ್ಮಿಕರು ಕುಟುಂಬ ಸಮೇತ ಬಾಡಿಗೆಗೆ ವಾಸವಿದ್ದ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಪ್ರತಿ ಮಹಡಿಯಲ್ಲಿ ಐದಾರು ಫ್ಲಾಟ್ ಗಳು ಇದ್ದವು ಎಂದು ವರದಿಯಾಗಿದೆ. ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಘಟನಾ ಸ್ಥಳಕ್ಕೆ ರಾಜಕೀಯ ಮುಖಂಡರು ಹಾಗೂ ಸರ್ಕಾರದ ಪ್ರತಿನಿಧಿಗಳು ಆಗಮಿಸಿದರು.
ಅವಶೇಷಗಳನ್ನು ತೆಗೆಯಲು ಜೆಸಿಬಿ ಮತ್ತು ಡ್ರಿಲ್ಲಿಂಗ್ ಯಂತ್ರಗಳನ್ನು ಬಳಸಿ ಶೋಧ ನಡೆಸಲಾಗುತ್ತಿದೆ. ಎಷ್ಟು ಮಂದಿ ಸಿಲುಕಿಕೊಂಡಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಶಾಸಕ ಮತ್ತು ಜಿಲ್ಲಾಧಿಕಾರಿ ಹೇಳಿದರು. ರಾತ್ರಿಯೂ ಫ್ಲಡ್ ಲೈಟ್ ಅಳವಡಿಸಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA