ವಿಡಿಯೋಗೆ ಪೋಸ್ ನೀಡುತ್ತಾ ಬೈಕ್ ಚಾಲನೆ ಮಾಡಿದ ಹಿನ್ನೆಲೆ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಧುಲೆ–ಸೋಲಾಪುರ ಹೆದ್ದಾರಿಯಲ್ಲಿ ನಡೆದಿದೆ. ಹಿಂಬದಿ ಸವಾರನ ಸ್ಥಿತಿ ಚಿಂತಾಜನಕವಾಗಿದೆ.
ಘಟನೆಯ ಸಂಪೂರ್ಣ ವಿಡಿಯೋ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಿಂಬದಿ ಸವಾರ ವಿಡಿಯೋ ಮಾಡಲು ಪ್ರಾರಂಭಿಸಿದಾಗ ಚಲನೆ ಮಾಡುತ್ತಿದ್ದಾತ ವಿಡಿಯೋಗೆ ಪೋಸ್ ನೀಡಲು ಮುಂದಾಗಿದ್ದಾನೆ. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಇಬ್ಬರು ಬೈಕ್ ಸವಾರರು ಕೂಡಾ ಹೆಲ್ಮೆಟ್ ಧರಿಸದೇ ಇರುವುದು ವಿಡಿಯೋದಲ್ಲಿ ಕಂಡುಬಂದಿದೆ.
ವರದಿಗಳ ಪ್ರಕಾರ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಹಾರಿ ರಸ್ತೆಗೆ ಬಿದ್ದಿದ್ದಾರೆ. ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದರೆ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪೆಯುತ್ತಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


