ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ಸೀನ್ ಫಿಂಗರ್ ಪ್ರಿಂಟ್ ಜೊತೆ ಹತ್ತಕ್ಕೂ ಹೆಚ್ಚು ಆರೋಪಿಗಳ ಫಿಂಗರ್ ಪ್ರಿಂಟ್ ಹೋಲಿಕೆಯಾಗಿದೆ ಎಂದು ವರದಿ ತಿಳಿಸಿದೆ. ವಿಧಿ ವಿಜ್ಞಾನ ಪರೀಕ್ಷೆಯಲ್ಲಿ (FSL) ದರ್ಶನ್, ಪವಿತ್ರಾ ಗೌಡ ಸೇರಿ ಹತ್ತು ಜನರ ಫಿಂಗರ್ ಪ್ರಿಂಟ್ ಹೋಲಿಕೆಯಾಗಿದೆ ಎನ್ನಲಾಗಿದೆ.
ಕ್ರೈಂ ಸೀನ್, ಮೃತದೇಹ ಬಿಸಾಕಿದ ಜಾಗ, ಮೃತದೇಹ ಸಾಗಾಟ ಮಾಡಿದ ವಾಹನ, ಶವ ಇಟ್ಟಿದ್ದ ಸೆಕ್ಯೂರಿಟಿ ಗಾರ್ಡ್ ಕೊಠಡಿ, ಮೃತನ ಬಟ್ಟೆಗಳು, ಹಲ್ಲೆ ಮಾಡಲು ಬಳಸಿದ ವಸ್ತುಗಳು, ಸಾಗಾಟ ಮಾಡಿದ ಕಾರ್, ಆರೋಪಿಗಳ ಬಟ್ಟೆಗಳ ಮೇಲಿನ ಫಿಂಗರ್ ಪ್ರಿಂಟ್ ಗಳನ್ನು ಸಂಗ್ರಹ ಮಾಡಲಾಗಿತ್ತು.
ಆರೋಪಿಗಳ ಬಂಧನದ ಬಳಿಕ ಎಲ್ಲರ ಫಿಂಗರ್ ಪ್ರಿಂಟ್ ಪಡೆದು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಫಿಂಗರ್ ಪ್ರಿಂಟ್ ಹೋಲಿಕೆಯಾಗಿದ್ದು ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ ಪ್ರಮುಖ ಸಾಕ್ಷ್ಯವಾಗಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


