ಕಾಲೇಜು ಯುವತಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ವಿವಿ ಪುರಂನಲ್ಲಿರುವ ಖಾಸಗಿ ಕಾಲೇಜೊಂದರ ಬಳಿ ಜು. 8ರಂದು ನಿಂತಿದ್ದ ಯುವತಿಯರಿಗೆ ತನ್ನ ಪ್ಯಾಂಟ್ ಜಿಪ್ ತೆಗೆದು ಮರ್ಮಾಂಗ ವನ್ನು ತೋರಿಸಿದ್ದ ಕಾಮುಕ ಅಲ್ಲಿಂದ ಪರಾರಿಯಾಗಿದ್ದ. ಆತನನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತನನ್ನು ರೆಹಮಾನ್ ಎಂದು ಗುರುತಿಸಲಾಗಿದೆ. ಕಾಲೇಜು ವಿದ್ಯಾರ್ಥಿನಿಯರು ನಿಂತಿದ್ದ ಗುಂಪಿನ ಕಡೆ, ಸ್ಕೂಟರ್ ನಲ್ಲಿ ಬಂದಿದ್ದ ಆತ ವಿದ್ಯಾರ್ಥಿನಿಯರು ಮಾತನಾಡುತ್ತಾ ನಿಂತಿದ್ದಾಗ ಅವರ ಗಮನ ಸೆಳೆಯಲು ವಿಕೃತ ಕುಚೇಷ್ಟೆಗಳನ್ನು ಮಾಡುತ್ತಿದ್ದ. ಕೂಡಲೇ ಗುಂಪಿನಲ್ಲಿದ್ದ ಯುವತಿಯೊಬ್ಬಳು, ಆತನ ವರ್ತನೆಗಳನ್ನು ತನ್ನ ಮೊಬೈಲಿನಲ್ಲಿ ರೆಕಾರ್ಡ್ ಮಾಡಿಕೊಳ್ಳುತ್ತಿದ್ದಳು. ಇದನ್ನರಿಯದ ಆತ, ತನ್ನ ಕುಚೇಷ್ಟೆಗಳನ್ನು ಮುಂದುವರಿಸಿದ್ದೇ ಅಲ್ಲದೆ, ತನ್ನ ಪ್ಯಾಂಟ್ ಜಿಪ್ ತೆಗೆದು ತೋರಿಸಿಯೇಬಿಟ್ಟಿದ್ದಾನೆ.
ಅದೂ ಸಹ ಯುವತಿಯ ಮೊಬೈಲಿನಲ್ಲಿ ರೆಕಾರ್ಡ್ ಆಗಿದೆ. ತನ್ನ ಮರ್ಮಾಂಗವನ್ನು ತೋರಿಸಿದ ಕೂಡಲೇ ಯುವತಿಯರು ರೊಚ್ಚಿಗೆದ್ದಿದ್ದನ್ನು ಗಮನಿಸಿದ ಆತ ತನ್ನ ಸ್ಕೂಟರಿನಲ್ಲಿ ಪರಾರಿಯಾಗಿದ್ದಾನೆ. ಬಳಿಕ ಯುವತಿಯರು ನೇರವಾಗಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿ, ವಿಡಿಯೋವನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಅದರ ಆಧಾರದಲ್ಲಿ ಪೊಲೀಸರು ಯುವಕನನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


