ರೈಲು ಹತ್ತುವ ವೇಳೆ ರೈಲಿನಿಂದ ಕೆಳಗೆ ಬಿದ್ದ ಮಹಿಳೆಯ ಕಾಲಿನ ಮೇಲೆ ರೈಲು ಹರಿದ ಪರಿಣಾಮ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಘಟನೆ ಮುಂಬೈನ ಬೇಲಾಪುರ ನಿಲ್ದಾಣದಲ್ಲಿ ನೆನ್ನೆ ನಡೆದಿದೆ.
ಮಳೆಯಿಂದಾಗಿ ಕೆಲವೊಂದು ಕಡೆಗಳಲ್ಲಿ ರೈಲು ಹಳಿಗಳು ಜಲಾವೃತಗೊಂಡಿದೆ ಮತ್ತು ಜಾರುತ್ತಿವೆ. ಇದರಿಂದಾಗಿ ಕೆಲವೊಂದು ರೈಲುಗಳ ಸಂಚಾರ ಸ್ಥಗಿತಗೊಂಡಿದೆ, ಇಲ್ಲೊಬ್ಬರು ಮಹಿಳೆ ಮುಂಬೈನ ಬೇಲಾಪುರ ನಿಲ್ದಾಣದಿಂದ ಥಾಣೆಗೆ ಹೋಗಲು ಬೆಳಿಗ್ಗೆ ರೈಲ್ವೆ ಪ್ಲಾಟ್ ಫಾರ್ಮ್ ಗೆ ಬಂದಿದ್ದಾರೆ ಈ ವೇಳೆ ಹೆಚ್ಚಿನ ಜನಸಂದಣಿ ಇದ್ದ ಪರಿಣಾಮ ಮಹಿಳೆ ರೈಲು ಹತ್ತುವ ವೇಳೆ ಮಹಿಳೆ ಆಕಸ್ಮಿಕವಾಗಿ ರೈಲಿನಿಂದ ಕೆಳಗೆ ಬಿದ್ದಿದ್ದಾರೆ.
ಅಷ್ಟೋತ್ತಿಗಾಗಲೇ ರೈಲು ಹೊರಟಿದೆ ಇದನ್ನು ಗಮನಿಸಿದ ಅಲ್ಲಿದ್ದ ಭದ್ರತಾ ಸಿಬಂದಿ ಕೂಡಲೇ ಸೂಚನೆ ನೀಡಿ ರೈಲನ್ನು ನಿಲ್ಲಿಸಿದ್ದಾರೆ. ಕೂಡಲೇ ರೈಲಿನ ಕೆಳಗೆ ಹೋಗಿ ಮಹಿಳೆಯನ್ನು ಹೊರಗೆಳೆದಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ರೈಲಿನ ಒಂದು ಬೋಗಿ ಆಕೆಯ ಕಾಲಿನ ಮೇಲೆ ಹರಿದು ಎರಡೂ ಕಾಲುಗಳನ್ನು ಕಳೆದುಕೊಂಡಿದ್ದಾರೆ. ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA