nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವರಾತ್ರಿ

    October 16, 2026

    ಸ್ಟ್ಯಾನ್‌ ಫೋರ್ಡ್– ಎಲ್ಸೆವಿಯರ್ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ಸರ್ಕಾರಿ ಕಾಲೇಜಿನ ಪ್ರೊ. ಡಾ. ಯೋಗೀಶ್ ಎನ್. ಸೇರ್ಪಡೆ

    October 16, 2026

    ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ

    October 16, 2026
    Facebook Twitter Instagram
    ಟ್ರೆಂಡಿಂಗ್
    • ನವರಾತ್ರಿ
    • ಸ್ಟ್ಯಾನ್‌ ಫೋರ್ಡ್– ಎಲ್ಸೆವಿಯರ್ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ಸರ್ಕಾರಿ ಕಾಲೇಜಿನ ಪ್ರೊ. ಡಾ. ಯೋಗೀಶ್ ಎನ್. ಸೇರ್ಪಡೆ
    • ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ
    • ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?
    • ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ
    • ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್
    • ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ
    • ಕೇದಿಗೇಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ: ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರಪ್ಪನ ಅಗ್ರಹಾರ: ದುರುಪಯೋಗ ತಡೆಗಟ್ಟಲು ಹೈರೆಸ್ಯೂಲೆಷನ್ ಜಾಮರ್‌ ಅಳವಡಿಕೆ: ಗೃಹ ಸಚಿವ ಪರಮೇಶ್ವರ
    ರಾಜ್ಯ ಸುದ್ದಿ July 9, 2024

    ಪರಪ್ಪನ ಅಗ್ರಹಾರ: ದುರುಪಯೋಗ ತಡೆಗಟ್ಟಲು ಹೈರೆಸ್ಯೂಲೆಷನ್ ಜಾಮರ್‌ ಅಳವಡಿಕೆ: ಗೃಹ ಸಚಿವ ಪರಮೇಶ್ವರ

    By adminJuly 9, 2024No Comments2 Mins Read
    g parameshwar

    ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈರೆಸ್ಯೂಲೇಷನ್ ಜಾಮರ್‌ಗಳನ್ನು ಅಳವಡಿಸಿದ್ದರಿಂದ ನೆರೆಹೊರೆಯ ನಿವಾಸಿಗಳಿಗೆ ತೊಂದರೆಯಾಗಿದ್ದು, ಇದನ್ನು ನಿವಾರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.

    ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ರಾಷ್ಟ್ರಪತಿಗಳ ಸುಧರಣಾ ಸೇವೆ ಪದಕ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರಧಾನ ಮತ್ತು ಸನ್ನಡತೆಯ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

    ಈ ಹಿಂದೆ ಜೈಲಿನ ಒಳಗೆ ಫೋನ್ ತಂದುಕೊಡುತ್ತಾರೆ. ಕೈದಿಗಳು ಹೊರಗಿನವರ ಜೊತೆ ಸಂಪರ್ಕ ಮಾಡುತ್ತಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಜೈಲಿನಲ್ಲಿ ಬೇರೆ ರಾಜ್ಯದ ಕೈದಿಗಳು ಇದ್ದಾರೆ. ಇಂತಹ ಸಂದರ್ಭದಲ್ಲಿ ಜಾಮರ್ ಅಳವಡಿಸುವುದರಿಂದ ಅಕ್ರಮಗಳನ್ನು ತಡೆಗಟ್ಟಬಹುದು ಎಂದರು.

    ಹೈ ರೆಸ್ಯೂಲ್ಯೂಷನ್ ಜಾಮರ್ ಹಾಕಿರುವುದರಿಂದ ಸುಮಾರು 800 ಮೀಟರ್ ವ್ಯಾಪ್ತಿಯವರೆಗೂ ಕಾರ್ಯನಿರ್ವಹಿಸುತ್ತದೆ. ಸ್ವಾಭಾವಿಕವಾಗಿ ಕಾಂಪೌಂಡ್‌ನಿಂದ ಹೊರಗು ವ್ಯಾಪಿಸಿರುವುದರಿಂದ ಜನರಿಗೆ ತೊಂದರೆಯಾಗಿತ್ತು‌. ಜಾಮರ್ ಕಾರ್ಯನಿರ್ವಹಣೆಯ ವ್ಯಾಪ್ತಿಯನ್ನು 100 ಮೀಟರ್‌ಗೆ ಇಳಿಸಲಾಗಿದೆ.  ಜಾಮರ್‌ಗಳನ್ನು ತೆಗೆಯುವುದಿಲ್ಲ ಎಂದು ತಿಳಿಸಿದರು‌.

    ಇಲಾಖೆಯಲ್ಲಿ ಬದಲಾವಣೆಯನ್ನು ತರಲು ಹೆಚ್ಚು ಪ್ರೋತ್ಸಾಹ ನೀಡಲಾಗುತ್ತಿದೆ. ಸನ್ನಡತೆಯ ಬಿಡುಗಡೆ ಹೊಂದಿರುವ ಸತೀಶ್ ಎಂಬಾತ ‘ತಾನು ಕಾನೂನು ಡಿಪ್ಲೋಮಾ ಮುಗಿಸಿದ್ದೇನೆ. ಹೊರಗಡೆ ಹೋದಾಗ ಜೀವನಕ್ಕೆ ಉಪಯೋಗವಾಗುತ್ತದೆ’ ಎಂದು ಹೇಳಿದ್ದಾನೆ. ಬಹಳ ಜನ ಪರಿವರ್ತನೆ ಹೊಂದಲು ಇಂತಹ ಅವಕಾಶ ಕಲ್ಪಿಸಿಕೊಡುತ್ತೇವೆ. ಕಾರ್ಪೆಂಟರ್, ಎಲೆಕ್ಟ್ರಿಕ್ ಕೆಲಸ, ಕಂಪ್ಯೂಟರ್ ತರಬೇತಿ ಕಲಿಸಿಕೊಡುತ್ತೇವೆ. ಕೈದಿಗಳು ಬದಲಾವಣೆ ಹೊಂದಲು ಅವಕಾಶವಾಗುತ್ತದೆ ಎಂದು ಹೇಳಿದರು‌.

    ನಟ ದರ್ಶನ್‌ಗೆ ರಾಜಾತೀಥ್ಯ ಸಿಗುತ್ತಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು ಜೈಲಿನ ಒಳಗೆ ನೇರವಾಗಿ ಬರಲು ನನಗೆ ಅವಕಾಶವಿಲ್ಲ. ಊಟ ಉಪಚಾರ ವಿಚಾರದಲ್ಲಿ ಬೇರೆ ರೀತಿ ಅತೀಥ್ಯ ನೀಡಿಲ್ಲ. ಜೈಲಿನಲ್ಲಿರುವ ಎಲ್ಲರಂತೆಯೇ ದರ್ಶನ್‌ಗೆ ವ್ಯವಸ್ಥೆ ಇದೆ. ಬಿರಿಯಾನಿ ಕೊಟ್ಟರು ಎಂದು ಕೆಲವರು ಆರೋಪಿಸಿದ್ದಾರೆ. ಅಂತಹ ಯಾವುದೇ ಘಟನೆ ನಡೆದಿಲ್ಲ‌ ಎಂದು ಸ್ಪಷ್ಟಪಡಿಸಿದರು.

    ಕೆಳಹಂತದ ಅಧಿಕಾರಿಗಳು ಹಲವು ವರ್ಷಗಳಿಂದ ಠಿಕಾಣಿ ಹೂಡಿದ್ದಾರೆ. ಅಂತವರು ಅಕ್ರಮಗಳಿಗೆ ಕೈಜೋಡಿಸುತ್ತಿದ್ದಾರೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಇದೆಲ್ಲವು ನನ್ನ ಗಮನಕ್ಕೆ ಇದೆ. ಬೇರೆಡೆ ವರ್ಗಾವಣೆಯಾದವರು ಮತ್ತೇ ಅದೇ ಸ್ಥಳಕ್ಕೆ ಮರು ವರ್ಗಾವಣೆಯಾಗಿಲ್ಲ. ನಾನೇ ವರ್ಗಾವಣೆ ಮಾಡುವುದರಿಂದ, ಅಂತಹ ಒಂದು ನಿದರ್ಶನವನ್ನು ತೋರಿಸಿ. ಇದು ಸಾಧ್ಯವೇ ಇಲ್ಲ. ಇಲಾಖೆಯಲ್ಲಿ ಮತ್ತಷ್ಟು ಸುಧಾರಣೆ ತರಲು ಕೆಲವು ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?

    October 16, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ನವರಾತ್ರಿ

    October 16, 2026

    ವಿ.ಎಂ.ಎಸ್.ಗೋಪಿ ಮೈಸೂರು ದಸರಾ ಎಷ್ಟೊಂದು ಸುಂದರ ನವರಾತ್ರಿ ಉತ್ಸವ ಹಬ್ಬದ ಸಡಗರ ಎಲ್ಲೆಲ್ಲೂ ಸಂಭ್ರಮ ನವ ಅವತಾರಗಳು ಶೈಲಪುತ್ರಿ ದುರ್ಗೆ…

    ಸ್ಟ್ಯಾನ್‌ ಫೋರ್ಡ್– ಎಲ್ಸೆವಿಯರ್ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ಸರ್ಕಾರಿ ಕಾಲೇಜಿನ ಪ್ರೊ. ಡಾ. ಯೋಗೀಶ್ ಎನ್. ಸೇರ್ಪಡೆ

    October 16, 2026

    ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ

    October 16, 2026

    ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?

    October 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.