ನಿಮ್ಮ ಮಗಳನ್ನು ಶಾಲೆಗೆ ಕಳಿಸಿದರೇ ಅವಳು ವೇಶ್ಯೆಯಾಗುತ್ತಾಳೆ ಎಂದು ಪಾಕಿಸ್ತಾನಿ ಯೂಟ್ಯೂಬರ್ ಹಸನ್ ಇಕ್ಬಾಲ್ ಚಿಶ್ತಿ ವಿವಾದಾತ್ಮಕ ಹೇಳಿಕೆ ನೀಡಿದ್ದಾನೆ.
ಪಾಕಿಸ್ತಾನಿ ಯೂಟ್ಯೂಬರ್ ಚಿಶ್ತಿ, ಬಾಲಕಿಯ ಶಿಕ್ಷಣವನ್ನು ಖಂಡಿಸುವ ಹಾಡನ್ನು ಬಿಡುಗಡೆ ಮಾಡಿದ್ದಾನೆ. ಈ ವಿಡಿಯೋದಲ್ಲಿ, ಹೆಣ್ಣುಮಕ್ಕಳು ಶಾಲೆಯಲ್ಲಿ ನೃತ್ಯ ಮಾಡುತ್ತಾರೆ, ಇದನ್ನು ಇಸ್ಲಾಂನಿಂದ ಒಪ್ಪಿಕೊಳ್ಳಲಾಗುವುದಿಲ್ಲ. ನಿಮ್ಮ ಮಗಳನ್ನು ಶಾಲೆಯಿಂದ ತೆಗೆದು ಹಾಕಿ, ಮನೆಗಳಲ್ಲಿ ಇರಿಸಿಕೊಳ್ಳಿ ಎಂದು ಹೇಳಿದ್ದಾರೆ.
ಶಾಲೆಗೆ ಹೋಗುವ ಹೆಣ್ಣುಮಕ್ಕಳು ತಮ್ಮ ಪವಿತ್ರತೆ ಮತ್ತು ಗೌರವವನ್ನು ಕಳೆದುಕೊಳ್ಳುತ್ತಾರೆ. ನೀವು ಗೌರವವನ್ನು ಕಳೆದುಕೊಳ್ಳಲು ಬಯಸಿದರೆ ಅಥವಾ ಅವಳನ್ನು ವೇಶ್ಯೆಯನ್ನಾಗಿ ಮಾಡಲು ಬಯಸಿದರೆ ಅವಳನ್ನು ಶಾಲೆಗೆ ಕಳುಹಿಸಿ ಎಂದು ಹಾಡಿನ ಸಾಹಿತ್ಯದಲ್ಲಿದೆ.
ಒಟ್ಟಾಯಾಗಿ ಪಾಕಿಸ್ತಾನಿ ಗಾಯಕನ ಹಾಡು ತಾಲಿಬಾನ್ ಸಿದ್ಧಾಂತದೊಂದಿಗೆ ಪ್ರತಿಧ್ವನಿಸಿದೆ ಮತ್ತು ಮನೆಗಳಿಗೆ ಸೀಮಿತಗೊಳಿಸುವ ಮೂಲಕ ಹೆಣ್ಣುಮಕ್ಕಳ ಶಿಕ್ಷಣವನ್ನು ನಿರ್ಬಂಧಿಸುವಂತೆ ಒತ್ತಾಯಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA