ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಭವಾನಿ ರೇವಣ್ಣಗೆ ಜುಲೈ 10ರಂದು ನೋಟಿಸ್ ಜಾರಿ ಮಾಡಿದೆ, ಹೀಗಾಗಿ ಮತ್ತೊಮ್ಮೆ ಭವಾನಿ ರೇವಣ್ಣಗೆ ಬಂಧನ ಭೀತಿ ಎದುರಾಗಿದೆ.
ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವಿಡಿಯೋದಲ್ಲಿನ ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂದು ಮೈಸೂರಿನ ಕೆ.ಆರ್. ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೆಚ್.ಡಿ.ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣನ ಸಂಬಂಧಿ ಬಾಬು ಈ ಸಂತ್ರಸ್ತೆಯನ್ನು ಅಪಹರಿಸಿದ್ದಾರೆ ಎನ್ನಲಾಗಿತ್ತು. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಈಗಾಗಲೆ ಆರೋಪಿ ಬಾಬುನನ್ನು ಬಂಧಿಸಿದ್ದಾರೆ.
ಪ್ರಕರಣದಲ್ಲಿ ಭವಾನಿ ರೇವಣ್ಣ ಅವರೂ ಕೂಡ ಎಸ್ ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಬೇಕು. ಈ ಸಂಬಂಧ ಎಸ್ ಐಟಿ ಭವಾನಿ ರೇವಣ್ಣ ಅವರಿಗೆ ಎರಡೆರಡು ನೋಟಿಸ್ ಕೊಟ್ಟಿತ್ತು. ನೋಟಿಸ್ ನೀಡುತ್ತಿದ್ದಂತೆ ಭವಾನಿ ರೇವಣ್ಣ ಅವರು ವಿಚಾರಣಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ನೀರಿಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಹೀಗಾಗಿ ಭವಾನಿ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಿತ್ತು.
ಈ ಜಾಮೀನು ಪ್ರಶ್ನಿಸಿ ಎಸ್ ಐಟಿ ಸುಪ್ರಿಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಈ ಸಂಬಂಧ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ ಸುಪ್ರಿಂಕೋರ್ಟ್ ಭವಾನಿ ರೇವಣ್ಣಗೆ ನೋಟಿಸ್ ಜಾರಿ ಮಾಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


