ಮಹಾರಾಷ್ಟ್ರ: ರೈಲು ನಿಲ್ದಾಣವೊಂದರಲ್ಲಿ ತಂದೆ-ಮಗ ಇಬ್ಬರು ಅಳುತ್ತಾ, ಕಣ್ಣೀರು ಒರೆಸುತ್ತಾ, ಕೈ ಕೈ ಹಿಡಿದು ಹೋಗಿ ಸೀದಾ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಭಯಾನಕ ದೃಶ್ಯವೊಂದು ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಇದು ನೋಡುಗರನ್ನು ಒಮ್ಮೆಲೆ ಬೆಚ್ಚಿಬೀಳಿಸುತ್ತದೆ.
ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯ ಬಯಾಂದ್ರ ರೈಲು ನಿಲ್ದಾಣದಲ್ಲಿ ಬೆಳಗ್ಗೆ 9.30ರ ವೇಳೆಗೆ ಈ ಘಟನೆ ಸಂಭವಿಸಿದ್ದು, ವಸೈ ನಿವಾಸಿಯಾದ 60 ವರ್ಷದ ಹರೀಶ್ ಮೆಹ್ತಾ ಹಾಗೂ 35 ವರ್ಷದ ಪುತ್ರ ಜಯ್ ಮೆಹ್ತಾ ಅವರು ಕೈ ಕೈ ಗಟ್ಟಿಯಾಗಿ ಹಿಡಿದುಕೊಂಡು ರೈಲಿಗೆ ತಲೆಯೊಡ್ಡಿದವರಾಗಿದ್ದಾರೆ.
ಇವರು ಪ್ಲಾಟ್ ಫಾರ್ಮ್ ಮೂಲಕ ನಡೆದುಕೊಂಡು ಸಾಗುವಾಗ ಒಂದು ರೈಲು ಪಕ್ಕದಿಂದಲೇ ಸಾಗಿದೆ. ಆದರೆ ಪ್ಲಾಟ್‌ಫಾರ್ಮ್ ಬಳಿಕ ರೈಲು ಹಳಿಗಳ ಮೇಲೆ ನಡೆದುಕೊಂಡು ಸಾಗುವಾಗ ವಿರುದ್ದ ದಿಕ್ಕಿನಿಂದ ರೈಲು ಬಂದಿದೆ. ಇಬ್ಬರು ಕೈ ಕೈ ಹಿಡಿದುಕೊಂಡಿದ್ದಾರೆ. ತಕ್ಷಣವೇ ರೈಲು ಬರುತ್ತಿರುವ ಹಳಿಯತ್ತ ತೆರಳಿದ್ದಾರೆ. ಬಳಿಕ ರೈಲಿನ ಹಳಿಯಲ್ಲಿ ತಲೆ ಇಟ್ಟು ಮಲಗಿದ್ದಾರೆ. ಅಷ್ಟೊತ್ತಿಗೆ ರೈಲು ಇವರಿಬ್ಬರ ಮೇಲಿನಿಂದ ಸಾಗಿದೆ. ಕ್ಷಣಾರ್ಧದಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ.ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೇರೆಯಾಗಿದೆ.
ಇನ್ನು ಸ್ಥಳಕ್ಕೆ ಆಗಮಿಸಿದ ರೈಲ್ವೇ ಪೊಲೀಸರು ಸ್ಥಳ ಮಹಜರು ಮಾಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇವರ ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ. ಈ ಘಟನೆ ಕುರಿತು ಹಲವರು ಪ್ರತಿಕ್ರಿಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


